ಉಡುಪಿ: Tulu Times | ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ನಡೆದಿರುವ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇಬ್ಬರು ಆರೋಪಿಗಳನ್ನು ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಮೀಪ ಬಂಧಿಸಲಾಗಿದ್ದು, ಸುಪೇಶ್ (25) ಮತ್ತು ಶಾಂತಾ (43) ಬಂಧಿತರಾಗಿದ್ದಾರೆ.
ಫೆಬ್ರವರಿ 3ರಂದು ಪಾವತಿ ವಿವರಗಳ ಪರಿಶೀಲನೆಸಮಯದಲ್ಲಿ ಜನವರಿ 28ರಂದು ಪಾವತಿಯಾಗಿದೆಯೆಂದು ಬ್ಯಾಂಕ್ ಸೀಲ್ ಹೊಂದಿದ್ದ ಚಲನ್ ಪತ್ತೆಯಾದರೂ, ಅದೇ ದಿನಾಂಕದ ಬ್ಯಾಂಕ್ ವಿವರ ಪಟ್ಟಿಯಲ್ಲಿ ಆ ಪಾವತಿ ದಾಖಲಾಗಿರಲಿಲ್ಲ. ನಗರಸಭೆ ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್‌ನ ನಗರಸಭೆಯ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಇದೆ ಎಂದು ಪೌರಾಯುಕ್ತ ಮಹಾಂತೇಶ್ ದೂರು ನೀಡಿದ್ದಾರೆ.
ಒಂದೇ ಚಲನ್ ಸಂಖ್ಯೆಗೆ ಎರಡು ಬೇರೆ ದಿನಾಂಕಗಳಲ್ಲಿ ಸೀಲ್ ಹೊಂದಿದ ಚಲನ್‌ಗಳು ದೊರೆತಿರುವುದು ಅನುಮಾನಕ್ಕೆ ಕಾರಣವಾಗಿದೆ. ಬ್ಯಾಂಕ್ ಸೀಲ್ ಹೊಂದಿದ್ದ ಕೆಲವು ಚಲನ್‌ಗಳು ಜನವರಿ 28ರಂದು ಜನರೇಟ್ ಆಗಿದ್ದ ಅದೇ ಚಲನ್ ಸಂಖ್ಯೆಯನ್ನು ಹೊಂದಿರುವುದು ಪತ್ತೆಯಾಗಿದೆ. ಯಾರೋ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ಆಸ್ತಿತೆರಿಗೆ ಪಾವತಿಸಿದ ಹಣವನ್ನು ವಂಚನೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಉಡುಪಿ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 207/2025ರಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ. ಇದೀಗ ತನಿಖೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.
Udupi: Suspects arrested for property tax fraud- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











