ಬೆಳ್ತಂಗಡಿ: Tulu Times | ಬೆಳ್ತಂಗಡಿಯಲ್ಲಿ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ ಆಗಿ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಘಟನೆ ನಡೆದ್ದು ಹೇಗೆ..?
ಫೆ.14 ರಂದು ಬೆಳಗ್ಗೆ 7:30 ಕ್ಕೆ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಕಾರ್ಯಕ್ರಮಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿದೆ. ಇದರ ಪರಿಣಾಮ ವಸ್ತುಗಳು ಸುಟ್ಟು ಕರಕಲಾಗಿವೆ. ಇದು ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಈ ಘಟನೆ ನಡೆದಿದೆ.
ಈ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ.
ಇದನ್ನೂ ಓದಿ: ವೈದ್ಯಕೀಯ ಸಲಹೆ ನೀಡುವಲ್ಲಿ AI ಚಾಟ್‌ಬಾಟ್‌ಗಳು ವಿಶ್ವಾಸಾರ್ಹವಲ್ಲ
ಬೆಂಕಿಯ ಕೆನ್ನಾಲಿಗೆಗೆ ಪಕ್ಕದ ಶಾಪ್ ಗಳಿಗೆ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ದೊಡ್ಡ ಅನಾಹುತ ಉಂಟಾಗಿಲ್ಲ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು. ಈ ವೇಳೆ, ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Helium gas blast in Belthangady…things burnt to ashes!- ತುಳುಟೈಮ್ಸ್











