ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಒಲೆಗೆ ಬೆಂಕಿ ಹಚ್ಚುವಾಗ ಬೆಂಕಿ ತಗುಲಿದ ಮಹಿಳೆ ಸಾವು

ಬೆಳ್ತಂಗಡಿ: Tulu Times | ಬಚ್ಚಲು ಒಲೆಗೆ ಬೆಂಕಿ ಹಚ್ಚುವಾಗ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ  ನಡೆದಿದೆ. ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಫೆ. 7ರಂದು ಮನೆಯ ಬಚ್ಚಲು ಕೋಣೆಯಲ್ಲಿ ನೀರು ಬಿಸಿ ಮಾಡಲು ಬೆಂಕಿ ಹಚ್ಚುವಾಗ ಮೀನಾಕ್ಷಿ (63) ಎಂಬವರಿಗೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿದೆ. ಈ ಸಂದರ್ಭದಲ್ಲಿ ತಕ್ಷಣವೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಹೀಗಾಗಿ, ಅಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಉಡುಪಿ: ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಆರೋಪಿಗಳು ಅರೆಸ್ಟ್

ಉಡುಪಿ: ಪ್ರತ್ಯೇಕ ಪ್ರಕರಣದಲ್ಲಿ, ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ನಡೆದಿರುವ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಮೀಪ ಬಂಧಿಸಲಾಗಿದ್ದು, ಸುಪೇಶ್ (25) ಮತ್ತು ಶಾಂತಾ (43) ಬಂಧಿತರಾಗಿದ್ದಾರೆ.

ಫೆಬ್ರವರಿ 3ರಂದು ಪಾವತಿ ವಿವರಗಳ ಪರಿಶೀಲನೆಸಮಯದಲ್ಲಿ ಜನವರಿ 28ರಂದು ಪಾವತಿಯಾಗಿದೆಯೆಂದು ಬ್ಯಾಂಕ್‌ ಸೀಲ್‌ ಹೊಂದಿದ್ದ ಚಲನ್ ಪತ್ತೆಯಾದರೂ, ಅದೇ ದಿನಾಂಕದ ಬ್ಯಾಂಕ್ ವಿವರ ಪಟ್ಟಿಯಲ್ಲಿ ಆ ಪಾವತಿ ದಾಖಲಾಗಿರಲಿಲ್ಲ. ನಗರಸಭೆ ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್‌ನ ನಗರಸಭೆಯ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಇದೆ ಎಂದು ಪೌರಾಯುಕ್ತ ಮಹಾಂತೇಶ್ ದೂರು ನೀಡಿದ್ದಾರೆ.

ಒಂದೇ ಚಲನ್ ಸಂಖ್ಯೆಗೆ ಎರಡು ಬೇರೆ ದಿನಾಂಕಗಳಲ್ಲಿ ಸೀಲ್ ಹೊಂದಿದ ಚಲನ್‌ಗಳು ದೊರೆತಿರುವುದು ಅನುಮಾನಕ್ಕೆ ಕಾರಣವಾಗಿದೆ. ಬ್ಯಾಂಕ್‌ ಸೀಲ್‌ ಹೊಂದಿದ್ದ ಕೆಲವು ಚಲನ್‌ಗಳು ಜನವರಿ 28ರಂದು ಜನರೇಟ್ ಆಗಿದ್ದ ಅದೇ ಚಲನ್ ಸಂಖ್ಯೆಯನ್ನು ಹೊಂದಿರುವುದು ಪತ್ತೆಯಾಗಿದೆ. ಯಾರೋ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ಆಸ್ತಿತೆರಿಗೆ ಪಾವತಿಸಿದ ಹಣವನ್ನು ವಂಚನೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಉಡುಪಿ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 207/2025ರಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ. ಇದೀಗ ತನಿಖೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.

Belthangady: Woman dies after catching fire while lighting stove- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 159

You cannot copy content of this page