ಮಂಗಳೂರು: Tulu Times | ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಆರೋಗ್ಯ ಸಮಸ್ಯೆಯಿಂದ ದಾಖಲಾಗಿದ್ದ ವ್ಯಕ್ತಿ ನಾಪತ್ತೆಯೊಬ್ಬರು ಘಟನೆ ನಡೆದಿದೆ.
ಆಸ್ಪತ್ರೆಯಿಂದಲೇ ನಾಪತ್ತೆಯಾಗಿದ್ದಾರೆ!
ಕಾರ್ಕಳ ನಿವಾಸಿ ಸುರಕ್ಷಣ್ (30) ಎಂಬವರು ನಾಪತ್ತೆಯಾಗಿದ್ದು, ಇವರು ಹಲವು ಸಮಯದಿಂದ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರು. ಪ್ರತಿದಿನ ಮಾತ್ರೆಗಳನ್ನು ತೆಗೆದುಕೊಳ್ಳುತಿದ್ದರು. ಎರಡು ದಿನಗಳ ಹಿಂದೆ ಮೂರ್ಛೆರೋಗ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ಮೂಲಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಸುರಕ್ಷಣ್ ಆಸ್ಪತ್ರೆಯ 3ನೇ ವಾರ್ಡ್‌ನಿಂದ ನಾಪತ್ತೆ ಯಾಗಿದ್ದಾರೆ. ಎಲ್ಲ ಕಡೆ ಹುಡುಕಾಡಿ, ಸಂಬಂಧಿಕರಲ್ಲಿ ವಿಚಾರಿಸಿದರೂ ಮಾಹಿತಿ ಲಭ್ಯವಾಗಿಲ್ಲ. ಇನ್ನು ಇವರ ಜೊತೆಗೆ ಫೋನ್ ಕೂಡ ಇರಲಿಲ್ಲ ಎಂದು ಮನೆಯವರು ಪೊಲೀಸರಿಗೆ ಮಾಹಿತಿ ತಳಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ
ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ ಮೀನುಗಾರಿಕೆಗೆ ತೆರಳಿದ್ದಾತ ಕೇರಳದ ತ್ರಿಶೂರಿನ ಸುಮೇಶ್ ಎಂಬವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಡಿ.3ರಂದು ಧಕ್ಕೆ ಬಂದಿದ್ದ ಸುಮೇಶ್ ಅವರು, ಬೋಟ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದರು. ಇವರು ಜ.7ರಂದು ಮಂಗಳೂರಿನ ಮೀನುಗಾರಿಕ ದಕ್ಕೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿದ್ದರು ಎನ್ನಲಾಗಿದೆ. 28 ಮಂದಿ ಕಾರ್ಮಿಕರೊಂದಿಗೆ ಮೀನುಗಾರಿಕೆಗೆ ತೆರಳಿದ್ದ ಅವರು ಕಾಣೆಯಾಗಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ವೇಳೆ ಬೂದು ಬಣ್ಣದ ಅರ್ಧ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಉದ್ದ ಬರ್ಮಡಾ ಧರಿಸಿದ್ದರು. 5.6 ಅಡಿ ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದಾರೆ. ಈ ವ್ಯಕ್ತಿ ಕಂಡುಬಂದರೆ ಪಾಂಡೇಶ್ವರ ಠಾಣೆಯನ್ನು ಸಂಪರ್ಕಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru: Man who went to hospital to get medicine goes missing!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











