ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕಾರ್ಕಳ: ಕೊರಗಜ್ಜ ದೇವಸ್ಥಾನದ ಧರ್ಮದರ್ಶಿ ದಿವಾಕರ ಪೂಜಾರಿ ವಿಧಿವಶ

ಕಾರ್ಕಳ: Tulu Times | ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಅವರು ಹಾರ್ಟ್‌ ಅಟ್ಯಾಕ್‌ ನೀಂದ  ವಿಧಿವಶರಾಗಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ರಸ್ತೆ ಕಾಂಕ್ರಿಟೀಕರಣ & ಸೇತುವೆ ನಿರ್ಮಾಣ ಕಾಮಗಾರಿಗೆ ಹರೀಶ್ ಪೂಂಜ ಚಾಲನೆ!

ಮುಂಡ್ಯೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ, ಕೊರಗರ ಪಂಜುರ್ಲಿ, ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ ನಿರಂತರ ಕೋಲ, ಅಗೇಲು ಸೇವೆಗಳು ನಡೆಯುತ್ತಿದ್ದವು. ಹೀಗಾಗಿ ಪ್ರತಿದಿನದ ಹಾಗೆ ದೈವ ದರ್ಶನಕ್ಕೆಂದು ತೆರಳಿದ್ದಾಗ ಹೃದಯಾಘಾತವಾಗಿದೆ. ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇನ್ನು ದಿವಾಕರ ಪೂಜಾರಿ ನಿಧನಕ್ಕೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ಮುಖಂಡ ಉದಯ್‌ ಕುಮಾರ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪಟ್ಟ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮುಂಬಯಿನ ಉದ್ಯಮಿ ಐಕಳ ಗಣೇಶ್ ಶೆಟ್ಟಿ, ಕಂಬಳ ಕ್ಷೇತ್ರದ ಬೋಳದಗುತ್ತು ಸತೀಶ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

Karkala: Divakar Pujari, the priest of Koragajja Temple, passes away- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 174

You cannot copy content of this page