ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಪುತ್ತೂರುಮಂಗಳೂರು

Kasaragod : ಸತ್ತು ಹೋದ ವ್ಯಕ್ತಿ ಮತ್ತೆ ಬದುಕಿ ಬಂದ..!

ಕುಂಬಳೆ ಕಂಚಿಕಟ್ಟೆ ರಾಮನಗರ ನಿವಾಸಿ ರಾಮ್ ನಾಥ್ ಗಟ್ಟಿ(70) ಅವರಿಗೆ ವಾರದ ಹಿಂದೆ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ಎರಡು ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಕೊನೆಗೆ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ ಕಾರಣ ಮನೆಗೆ ಕರೆತಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಯಿತು.

ಸಂಬಂಧಿಕರು ಹಾಗೂ ಸ್ಥಳೀಯರು ಮನೆಯಲ್ಲಿ ಸೇರಿದ್ದರು. ಕುಂಟಂಗೇರ ಸ್ಮಶಾನಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ರಾಮನಾಥ್ ಅವರ ದೇಹ ಕಂಪಿಸುತ್ತಿರುವುದನ್ನು ಗಮನಿಸಿದ ಸಂಬಧಿಕರು, ಅವರನ್ನು ಕೂಡಲೇ ಕಾಸರಗೋಡಿನ ಜನರಲ್ ಆಸ್ಪತ್ರೆಗೆ ದಾಖಲಿಸಿದರು.

ವೈದ್ಯರು ನಡೆಸಿದ ತಪಾಸಣೆ ವೇಳೆ ಉಸಿರಾಟವಿರುವುದು ಖಚಿತಗೊಂಡಿತ್ತು. ಬಳಿಕ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಮಧ್ಯೆ ನಿನ್ನೆ ರಾತ್ರಿ ನಿಧನ ಸಂಭವಿಸಿದೆ. ಮೃತರು ಪತ್ನಿ ರೂಪವತಿ, ಮಕ್ಕಳಾದ ಅನಿಲ್, ಡೆನಿಲ್, ಸಹೋ ದರ-ಸಹೋ ದರಿಯರಾದ ಜಯರಾಮ ಗಟ್ಟಿ, ಸುರೇ ಶ್ ಗಟ್ಟಿ, ರತಿ, ಸಾವಿತ್ರಿ, ಉಷಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಇದನ್ನೂ ಓದಿ : ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು

 

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 204

You cannot copy content of this page