ಬ್ರೇಕಿಂಗ್ ನ್ಯೂಸ್
ಕರ್ನಾಟಕಬಂಟ್ವಾಳ

ಬಂಟ್ವಾಳದಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆ ಬಲಿ

ಬಂಟ್ವಾಳ: Tulu Times | ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಬಲಿಯಾಗಿರು ಘಟನೆ ನಡೆದಿದೆ.
ಮಂಗಳೂರಿನ ನಿವಾಸಿಯಾಗಿರುವ ವಿಶಾಲಾಕ್ಷಿ (45)  ಮೃತ ಮಹಿಳೆಯಾಗಿದ್ದಾರೆ.

ರಿಕ್ಷಾ ಬೈಕ್ ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ಇನ್ನೊಂದು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಮಂಗಳೂರು ಕಡೆಯಿಂದ ಬರುತ್ತಿರುವ ವೇಳೆ ಕಡೆಗೋಳಿ ಜಂಕ್ಷನ್ ನಲ್ಲಿ ಬೈಕ್ ಸವಾರನೋರ್ವ ಎದುರುಗಡೆ ಕ್ರಾಸ್ ಆಗಿದ್ದಾನೆ. ಈ ವೇಳೆ ರಿಕ್ಷಾಗಳು ಸರಣಿ ಅಪಘಾತವಾಗಿ  ಪಲ್ಟಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ AI ಫೇಸ್ ರೆಕಾಗ್ನಿಷನ್ ವ್ಯವಸ್ಥೆ

ಚಾಲಕ ಸಹಿತ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಿಕ್ಷಾದಲ್ಲಿ ವಿಶಾಲಾಕ್ಷಿ ಅವರ ತಂಗಿ ಹಾಗೂ ಅವರ ಇಬ್ಬರು ಮಕ್ಕಳು ಕೂಡ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್‌..ವೀಡಿಯೋ ವೈರಲ್ !

ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ, ವಿದ್ಯಾರ್ಥಿಯೊಬ್ಬ ಅತೀ ವೇಗವಾಗಿ ಬೈಕ್ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದಿರುವ ಘಟನೆ ನಡೆದಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿದ್ಯುತ್ ಆಘಾತ ಆಗಿದ್ದು ಹೇಗೆ..?

ಉಳ್ಳಾಲ ತಾಲೂಕಿನ ಕಿನ್ನ ಸಂಕೇಶ ಎಂಬಲ್ಲಿ ಬೈಕ್ ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಿದ್ದು ಸವಾರರಿಬ್ಬರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರಾಗಿದ್ದಾರೆ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್. ಬೈಕಿನಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಂಬ ಮುರಿದು ಬಿದ್ದಿದೆ. ಡಿಕ್ಕಿಯಾಗಿ ವಿದ್ಯುತ್ ತಂತಿ ಬಿದ್ದಿದೆ. ಜನ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ.ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

Woman dies after rickshaw overturns in Bantwal- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 126

You cannot copy content of this page