ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ : 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿ

ಬೆಂಗಳೂರು: Tulu Times l 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿರುವುದರಿಂದ ಭದ್ರತೆ, ಮೇಲ್ವಿಚಾರಣೆ ಮತ್ತು ವಿದ್ಯಾರ್ಥಿ ಸೌಲಭ್ಯಗಳ ಬಗ್ಗೆ ಕಠಿಣ ಕ್ರಮಗಳನ್ನು ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪಿಯುಸಿ ಪರೀಕ್ಷಾ ವೇಳಾಪಟ್ಟಿ ;

2026ರ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಾವಿರಾರು ಶಾಲೆಗಳು ಮತ್ತು ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಏಪ್ರಿಲ್ 7ರಂದು ತಾತ್ಕಾಲಿಕ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಎರಡನೇ ಪರೀಕ್ಷೆ ಏಪ್ರಿಲ್ 25ರಿಂದ ಮೇ 9ರವರೆಗೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ;

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ 24ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಎರಡನೇ ಪರೀಕ್ಷೆ ಮೇ 18ರಿಂದ ಮೇ 25ರವರೆಗೆ ನಡೆಯಲಿದೆ.

ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ;

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ತಡೆಯಲು ವಿಶೇಷ ನಿಗಾವ್ಯವಸ್ಥೆ ಮಾಡಲಾಗಿದೆ. ಸುಳ್ಳು ಮಾಹಿತಿ ಹರಡುವ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಪರೀಕ್ಷೆಗಳ ಸುರಕ್ಷತೆಗಾಗಿ ಪೊಲೀಸರ ಸಹಾಯವೂ ಪಡೆಯಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ;

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸುಲಭವಾಗಿ ತಲುಪಲು KSRTC ಮತ್ತು BMTC ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಪರೀಕ್ಷೆಗಳು ನಿಷ್ಪಕ್ಷಪಾತವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.

SSLC and PUC Exam 2026: More than 16 lakh students – ತುಳುಟೈಮ್ಸ್

ಇದನ್ನೂ ಓದಿ : ಹೊಳೆಯುವ ತ್ವಚೆ ನಿಮ್ಮದಾಗಲು ಸರಳ ಟಿಪ್ಸ್‌ ಇಲ್ಲಿದೆ ನೋಡಿ!

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/HsJtl7d3RiI?si=4P1WADRTqfIH6jlW

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 151

You cannot copy content of this page