ಕರ್ನಾಟಕ: Tulu Times | ಊಟದ ಬಳಿಕ ವೀಳ್ಯದೆಲೆ ತಿನ್ನೋದು ವಾಡಿಕೆ. ಹಿಂದಿನ ಕಾಲದಿಂದಲೂ ಊಟದ ನಂತರ ವೀಳ್ಯದೆಲೆ ತಿನ್ನುವುದು ಮಾಮೂಲಿಯಾಗಿದೆ.
ವೀಳ್ಯದೆಲೆ ತಿನ್ನುವುದರಿಂದ ಲಾಭ ಏನು..?
ಹೌದು ವೀಳ್ಯದ ಎಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು, ಇವು ಹಲವು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ಬರೀ ಸಂಪ್ರದಾಯ ಮಾತ್ರವಲ್ಲ ಸಾಕಷ್ಟು ಪ್ರಯೋಜನಗಳನ್ನೂ ಹೊಂದಿದೆ. ಪೂಜೆ, ವಿವಾಹ ಸಮಾರಂಭವಾಗಿರಲಿ ಅಥವಾ ಯಾವುದೇ ಇತರ ಧಾರ್ಮಿಕ ಆಚರಣೆಯಾಗಿರಲಿ, ಪ್ರತಿ ಶುಭ ಸಂದರ್ಭದಲ್ಲಿಯೂ ವೀಳ್ಯದ ಎಲೆ ಇರಲೇಬೇಕು.
ಇದು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು, ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಬಾಯಿಯ ದುರ್ವಾಸನೆಯನ್ನು ನಿವಾರಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದು ಅಜೀರ್ಣ, ಗ್ಯಾಸ್, ಮಲಬದ್ಧತೆ, ಹೊಟ್ಟೆಯುಬ್ಬರ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಇದು ನಿಮ್ಮ ಮನಸ್ಸನ್ನು ಶಾಂತಗೊಳಿಸಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.
ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ವೀಳ್ಯದ ಎಲೆಗಳನ್ನು ಅಗಿಯುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ. ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯ ದುರ್ವಾಸನೆಗೆ ಪ್ರಮುಖ ಕಾರಣವಾಗಿರುವ ಬಾಯಿಯಲ್ಲಿ ಬೆಳೆಯುವ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕಡಿಮೆ ಮಾಡುತ್ತದೆ. ಹಲ್ಲುನೋವು, ಒಸಡುಗಳಲ್ಲಿ ರಕ್ತಸ್ರಾವದಂತಹ ಸಮಸ್ಯೆಗಳಿಗೆ ವೀಳ್ಯದ ಎಲೆಗಳು ತುಂಬಾ ಪ್ರಯೋಜನಕಾರಿ. ವೀಳ್ಯದ ಎಲೆಗಳು ವಿಟಮಿನ್ ಸಿ ಅನ್ನು ಹೊಂದಿರುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
Do you know why we eat betel leaves after meals?- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess










