ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಪುತ್ತೂರುಬಂಟ್ವಾಳಮಂಗಳೂರು

ಬ್ರಹ್ಮಾವರ: ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು, ಸವಾರ ಗಂಭೀರ

ಉಡುಪಿ ಅ.23: ಚಿರತೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು, ಚಿರತೆ ಸಾವನಪ್ಪಿದ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರಿನಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ನಂಚಾರಿನ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಭಾಸ್ಕರ್ ಶೆಟ್ಟಿ ತಡ ರಾತ್ರಿ ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ರಸ್ತೆಗೆ ಬಂದ ಚಿರತೆಗೆ ‌ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಿಯಂತ್ರಣ ಕಳೆದುಕೊಂಡು ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನಪ್ಪಿದೆ. ಹೆಬ್ರಿ ಅರಣ್ಯ ಇಲಾಖೆಯವರು ಸ್ಥಳಕ್ಕಾಗಮಿಸಿ ಮೃತಪಟ್ಟ ಚಿರತೆಯನ್ನು ಪರಿಶೀಲಿಸಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mangaluru: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶ – ಎರಡು ಖಾತೆಗಳ ವಿರುದ್ಧ ಎಫ್‌ಐಆರ್‌

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 173

You cannot copy content of this page