ಬ್ರೇಕಿಂಗ್ ನ್ಯೂಸ್
ಕರ್ನಾಟಕ

ನಾಳೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕ: Tulu Times | ಚಂಡಮಾರುತ ಪರಿಚಲನೆ ತೀವ್ರತೆಯಿಂದ  ಒಳನಾಡು ಜಿಲ್ಲೆಗಳಲ್ಲಿ ಗುಡಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಈಗಾಗಲೇ ಬೇಸಿಗೆ ಶುರುವಾಗಿದೆ. ನಾಳೆ ಫೆಬ್ರವರಿ 22 ಭಾನುವಾರದಿಂದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎನ್ನಲಾಗಿದೆ. ಕೆಲವೆಡೆ ಗರಿಷ್ಠ ತಾಪಮಾನದ ಅನುಭವ ಇನ್ನೂವರೆಗೆ ಆಗಿಲ್ಲ. ಈ ಮಧ್ಯೆ ಎರಡು ದಿನಗಳ ಹಿಂದೆ ರಾಜ್ಯದ ಪುತ್ತೂರು ಸುತ್ತಮುತ್ತ ಕೆಲ ಕಾಲ ಜೋರು ಮಳೆ ದಾಖಲಾಗಿತ್ತು. ಹಿಂದೂ ಮಹಾಸಾಗರ ಮತ್ತು ಅದಕ್ಕೆ ಹೊಂದಿಕೊಂಡ ಬಂಗಾಳಕೊಲ್ಲಿ ನೈಋತ್ಯ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿತ್ತು.

ಹವಾಮಾನ ತಜ್ಞರು ಹೇಳುವ ಪ್ರಕಾರ,  ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಾಗೂ ಬೀದರ್, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ/ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಬಳ್ಳಾರಿ, ವಿಜಯನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮಳೆ ಎಚ್ಚರಿಕೆ ನಡುವೆಯು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಾಮನ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆ ಆಗಲಿದೆ . ರಾಜಧಾನಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 17-18 ಡಿಗ್ರಿ ಸೆಲ್ ಸೆಲ್ಸಿಯಸ್ ತಾಪಮಾನ ಕಂಡು ಬರುತ್ತಿದೆ. ಇಲ್ಲಿ ತಂಪು ವಾತಾವರಣ ಸಂಪೂರ್ಣ ಮರೆಯಾಗಿದೆ.

Thunderstorms expected in many interior districts tomorrow- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 149

You cannot copy content of this page