ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪುರುಷ ಪ್ರಯಾಣಿಕರಿಗೆ ಬಂಪರ್​ ಗುಡ್​ ನ್ಯೂಸ್..!

ಕರ್ನಾಟಕ: Tulu Times | ರಾಜ್ಯದ ಪುರುಷ ಪ್ರಯಾಣಿಕರಿಗೆ ಬಂಪರ್​ ಗುಡ್​ ನ್ಯೂಸ್  ಒಂದು ಸಾರಿಗೆ ಇಲಾಖೆ ಕೊಟ್ಟಿದೆ. ಸಾರಿಗೆ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಪೀರಿಡ್ಸ್ ವೇಳೆ ಸೇವಿಸಬೇಕಾದ ಆಹಾರಗಳು: ನೋವು ಕಡಿಮೆ, ಆರೋಗ್ಯ ವೃದ್ಧಿ

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಈಗ ದರ ಏರಿಕೆ ಮಾಡುವ ಪ್ರಶ್ನೆಯೇ ಇಲ್ಲ. ಮುಂದಿನ ಪರಿಸ್ಥಿತಿಯನ್ನು ಅವಲೋಕಿಸಿ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಜಲಮಂಡಳಿ, ವಿದ್ಯುತ್ ದರ ಹಾಗೂ ಮೆಟ್ರೋ ಮಾದರಿಯಲ್ಲಿ ಬಸ್ ದರ ನಿಗದಿ ಮಾಡುವ ಯೋಚನೆಯೂ ಸರ್ಕಾರದ ಮುಂದೆ ಇತ್ತು.

ಇದನ್ನೂ ಓದಿ: AI ಸಮಿಟ್‌ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ : ದೊಡ್ಡ ಸಂಚಿನ ಭಾಗವಾಗಿರಬಹುದೇ ?

ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಸಮಿತಿ ರಚಿಸಿ, ಅದರ ಶಿಫಾರಸು ಆಧಾರದಲ್ಲಿ ದರ ಪರಿಷ್ಕರಣೆ ಮಾಡಲು ಯೋಜಿಸಲಾಗಿತ್ತು. ಆದರೆ ಇನ್ನೂ ಸಮಿತಿ ರಚನೆಯಾಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ದರ ಏರಿಕೆ ಸಾಧ್ಯವಾಗಿಲ್ಲ. ಕನಿಷ್ಠ ಮುಂದಿನ ಆರು ತಿಂಗಳು ಬಸ್ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಇದೆ. ಪುರುಷ ಪ್ರಯಾಣಿಕರಿಗೆ ನಿರಾಳತೆ ದೊರೆಯಲಿದೆ. ಸಮಿತಿ ರಚನೆಯಾದ ಬಳಿಕವೇ ದರ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Bumper good news for male passengers..!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 149

You cannot copy content of this page