ಮಂಗಳೂರು: Tulu Times | ಎರಡು ಜಾತಿ ನಿಂದನೆ ಪ್ರಕರಣಗಳಲ್ಲಿ ಆರೋಪಿಗಳಿಗೆ ಜೈಲುಶಿಕ್ಷೆ ಹಾಗೂ ದಂಡ ವಿಧಿಸಲು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿದೆ.
ಪ್ರಕರಣ 1 ಏನು..?
2019ರಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ವ್ಯಕ್ತಿಯೊಬ್ಬರ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿದಂತೆ ಆರೋಪಿ ನಾರಾಯಣ ಗೌಡ ಎಂಬಾತನಿಗೆ ಕಲಂ 447, 324 ಮತ್ತು 504 ಅನ್ವಯ ಶಿಕ್ಷೆ ಪ್ರಕಟಿಸಿ 500, 10,000 ಮತ್ತು 10,000 ರೂ.ದಂಡ ಪಾವತಿ ಮಾಡಲು ಸರ್ಕಾರ ಆದೇಶ ನೀಡಿದೆ.
ಪ್ರಕರಣ 2 ಏನು..?
2022ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಸ್ಮಾನ್ ಎಂಬಾತನಿಗೆ ನ್ಯಾಯಾಲಯವು ಐಪಿಸಿ ಕಲಂ 354, 506 ಮತ್ತು ಎಸ್ಸಿ-ಎಸ್ಟಿ 3(1)ಡಬ್ಲ್ಯು, 3(2)(ವಿಎ), ಕಾಯ್ದೆಯಡಿ 1 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ. ದಂಡ ತೆರಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳು ಶಿಕ್ಷೆ ವಿಧಿಸಿದೆ. ಐಪಿಸಿ 506ರ ಅನ್ವಯ 6 ತಿಂಗಳು ಜೈಲು ಶಿಕ್ಷೆ 5 ಸಾವಿರ ರೂ.ದ.ಡ ವಿಧಿಸಿದೆ.
Mangaluru: Caste abuse accused sentenced to prison- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess










