ಸುಳ್ಯ: Tulu Times | ಸುಳ್ಯ ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಚಲಿಸುತ್ತಿರುವ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಕಾರು ಚಲಿಸುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ನಂದಿನಿ ತುಪ್ಪಕ್ಕೆ ಕ್ಯೂಆರ್ ಕೋಡ್ ಕವಚ: ನಕಲಿ ತುಪ್ಪಕ್ಕೆ ಕಡಿವಾಣ ಹಾಕಲು ಕೆಎಂಎಫ್ ಮಹತ್ವದ ಹೆಜ್ಜೆ
ಪಂಜ ಕಡೆಗೆ ಹೋಗಿ ಬೆಳ್ಳಾರೆಯಿಂದ ಸುಳ್ಯ ಕಡೆಗೆ ಹಿಂದಿರುಗಿ ಬರುತ್ತಿದ್ದ ವೇಳೆ ಬೇಂಗಮಲೆಯಲ್ಲಿ ರಸ್ತೆ ಬದಿಯಲ್ಲಿದ್ದ ದೊಡ್ಡ ಚೇರೆ ಮರ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಸುಳ್ಯದ ಉಮ್ಮರ್ ಅವರ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಹಾಗೂ ಇನ್ನೊಬ್ಬರು ಸಾಲ ವಸೂಲಾತಿಗಾಗಿ ಹೋಗುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಸುಮಾರು ಅರ್ಧ ಗಂಟೆ ರಸ್ತೆತಡೆ ಉಂಟಾಯಿತು. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಮೇಲೆ ಬಿದ್ದ ಮರವನ್ನು ಸಾರ್ವಜನಿಕರು ತೆರವು ಮಾಡಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ ಜೂನ್ ಅಂತ್ಯದೊಳಗೆ ಸಾಧ್ಯ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ
Tree falls on car in Sullia; Miraculous escape!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess










