ಸ್ಯಾಂಡಲ್ ವುಡ್: Tulu Times | ಭೀಮ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐಶ್ವರ್ಯ ನಿರ್ದೇಶಕನ ಕಿಡ್ನಾಪ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಇವರ ಜೊತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಮಂಗಳೂರು ಏರ್ಪೋರ್ಟ್ಗೆ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ!
ನಿರ್ದೇಶಕ ಅನೀಶ್ ಎಂಬವರು ಜೀವನದ ಭಾಷೆ ಎಂಬ ಹೊಸ ಸಿನಿಮಾವನ್ನು ಆರಂಭಿಸಿದ್ದರು.ಆದರೆ ಕಾರಣಾಂತರಗಳಿಂದ ಈ ಸಿನಿಮಾ ನಿಲ್ಲಿಸಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ತನ್ನ ಕಾರು ಮಾರಾಟದ ಕುರಿತು ಪರಿಚಯದ ನಟಿ ಐಶ್ವರ್ಯಾ ಅವರಿಗೆ ಮಾಹಿತಿ ನೀಡಿದ್ದರು. ಇದೇ ವಿಚಾರಕ್ಕೆ ನಿರ್ದೇಶಕನನ್ನು ನಟಿ ಐಶ್ವರ್ಯಾ ಮೂಲಕ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬಳಿಕ ಆಡುಗೋಡಿ ಠಾಣೆ ವ್ಯಾಪ್ತಿಗೆ ಕರೆದು ಕಾರಿನಲ್ಲೇ ಕಿಡ್ನಾಪ್ ಮಾಡಿದ್ದಾರೆ. ಬ್ಯಾಡರಹಳ್ಳಿಯ ಮನೆಯೊಂದರಲ್ಲಿ ಇರಿಸಿ, ಕ್ರಿಕೆಟ್ ಸ್ಪಂಪ್ ಹಾಗೂ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಳೆಯುತ್ತಿರುವ ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಆಹಾರ ಪದ್ಧತಿ
ಆತನ ಬಳಿ ಇದ್ದ ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ಬಳಿ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಐದು ಲಕ್ಷ ರೂಪಾಯಿ ಹಣದ ವ್ಯವಹಾರಕ್ಕೆ ಸಂಬಂಧಿಸಿದ ಜಗಳವೇ ಈ ಕೃತ್ಯಕ್ಕೆ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ಆಶೀರ್ವಾದ್ ಈ ಕೃತ್ಯದ ಮಾಸ್ಟರ್ ಮೈಂಡ್ ಎಂದು ಪೊಲೀಸರು ತಿಳಿಸಿದ್ದಾರೆ.
Bheema movie actress Aishwarya arrested in kidnapping case!- ತುಳುಟೈಮ್ಸ್
ಇದನ್ನೂ ಓದಿ: ಫೆಬ್ರವರಿ 27ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ನೀಡಿದ ಆಶಾ ಕಾರ್ಯಕರ್ತೆಯರು
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess










