ಬಂಟ್ವಾಳ Tulu Times | ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಮಾಡಿದ ಇಬ್ಬರು ಕಿಡಿಗೇಡಿಗನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಫೆಬ್ರವರಿ 27, 2026 : ಇಂದಿನ ರಾಶಿಭವಿಷ್ಯ
ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಅಬ್ದುಲ್ ರಜಾಕ್ ಹಾಗೂ ಫೆಬಿಯಸ್ ಜೈಸನ್ ಪಿರೇರಾ (24) ಎಂದು ಗುರುತಿಸಲಾಗಿದೆ. ಸಾರ್ವಜನಿಕ ಮೈದಾನದಲ್ಲಿ 2 ವ್ಯಕ್ತಿಗಳು ಮಾದಕ ವಸ್ತು ಸೇವಿಸಿ ನಶೆಯಿಂದ ಜನರಿಗೆ ತೊಂದರೆಯಾಗುವಂತೆ ವರ್ತನೆ ಮಾಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರೂ ಕೂಡ ಮಾದಕ ಗಾಂಜಾ ಸೇವನೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal police arrest two people for consuming drugs..!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











