ಬ್ರೇಕಿಂಗ್ ನ್ಯೂಸ್
ದೇಶ

ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಅವಧಿ 21 ದಿನದಿಂದ 25 ದಿನಕ್ಕೆ ಹೆಚ್ಚಳ

ನವದೆಹಲಿ : Tulu Times l ಎಲ್‌ಪಿಜಿ ಸಿಲಿಂಡರ್ ಸಂಗ್ರಹ (ಹೋರ್ಡಿಂಗ್) ಮತ್ತು ಅಕ್ರಮ ವ್ಯವಹಾರ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಎಲ್‌ಪಿ ಜಿ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

 ಅಲ್ಲದೇ ಗಲ್ಫ್ ಪ್ರದೇಶ ಮತ್ತು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಸಾಗಣೆ ತೊಂದರೆ ಉಂಟಾಗಿರುವುದು ಪ್ರಮುಖ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದ ಮಾಹಿತಿಯ ಪ್ರಕಾರ, ಸಾಮಾನ್ಯವಾಗಿ ಗ್ರಾಹಕರು ಸುಮಾರು 55 ದಿನಗಳ ಅಂತರದಲ್ಲಿ ಎಲ್‌ಪಿಜಿ ಸಿಲಿಂಡರ್ ಬುಕ್ ಮಾಡುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಕೇವಲ 15 ದಿನಗಳಲ್ಲೇ ಮತ್ತೆ ಬುಕ್ಕಿಂಗ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಅನಗತ್ಯ ಸಂಗ್ರಹ ಮತ್ತು ಅವ್ಯವಹಾರ ಹೆಚ್ಚುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬುಕ್ಕಿಂಗ್ ಅವಧಿಯನ್ನು 25 ದಿನಗಳಿಗೆ ಹೆಚ್ಚಿಸುವ ಮೂಲಕ ನಿಯಂತ್ರಣ ತರಲು ಸರ್ಕಾರ ಕ್ರಮ ಕೈಗೊಂಡಿದೆ.

ದೇಶೀಯ ಬಳಕೆಗೆ ಆದ್ಯತೆ ;

ಸರ್ಕಾರ ತೈಲ ಶುದ್ಧೀಕರಣ ಘಟಕಗಳಿಗೆ ಎಲ್‌ಪಿಜಿ ಉತ್ಪಾದನೆ ಹೆಚ್ಚಿಸುವಂತೆ ಸೂಚನೆ ನೀಡಿದೆ. ಜೊತೆಗೆ ವಾಣಿಜ್ಯ ಸಂಪರ್ಕಗಳಿಗಿಂತ ಮನೆ ಬಳಕೆಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ. ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಅನೇಕ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ.

ಇಂಧನ ದರ ಏರಿಕೆಯ ಸಾಧ್ಯತೆ ಕಡಿಮೆ ;

ಸರ್ಕಾರದ ಮೂಲಗಳ ಪ್ರಕಾರ, ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 130 ಡಾಲರ್ ಮೀರಿದರೆ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಸಂಭವಿಸಬಹುದು. ಪ್ರಸ್ತುತ ಬೆಲೆ ಸುಮಾರು 100 ಡಾಲರ್ ಸುತ್ತಮುತ್ತ ಇರಬಹುದು ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ಪೆಟ್ರೋಲ್ ಬಂಕ್‌ನಲ್ಲಿ ಕೊರತೆ ಉಂಟಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

LPG cylinder booking period increased from 21 days to 25 days – ತುಳುಟೈಮ್ಸ್

ಇದನ್ನೂ ಓದಿ : ಸಸ್ಯಗಳಲ್ಲಿ ನೀರು ನಿಯಂತ್ರಣದ ಹೊಸ ವಿಧಾನ ಪತ್ತೆ: ಕೊಲ್ಕತ್ತಾ ವಿಜ್ಞಾನಿ ತಂಡದ ಮಹತ್ವದ ಸಂಶೋಧನೆ

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/65g4QkcjfLA?si=3FxpDsNHEOM3AoUr

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 18

You cannot copy content of this page