ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗ ಸಿಗುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : Tulu Times l ಮಹಿಳೆಯರಿಗೆ ತಿಂಗಳ ಮುಟ್ಟಿನ ರಜೆ ನೀಡುವ ಕುರಿತು ಕಾನೂನು ಜಾರಿಗೊಳಿಸಲು ಒತ್ತಾಯಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ಸುಪ್ರೀಂ‌ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಇಂತಹ ಕಾನೂನು ಮಾಡಿದರೆ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರ ಅವಕಾಶಗಳಿಗೆ ಹಾನಿಯಾಗಬಹುದು ಎಂದು ನ್ಯಾಯಾಲಯ ತಿಳಿಸಿದೆ.

ವಕೀಲರಾದ ಶೈಲೇಂದ್ರ ಎಂಬವರು ಸಲ್ಲಿಸಿದ್ದ ಅರ್ಜಿಯಲ್ಲಿ, ವಿದ್ಯಾರ್ಥಿನಿಯರು ಮತ್ತು ಉದ್ಯೋಗದಲ್ಲಿರುವ ಮಹಿಳೆಯರಿಗೆ ಮುಟ್ಟಿನ ಅವಧಿಯಲ್ಲಿ ರಜೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮಾತನಾಡಿ, ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಕ ಮಾಡಲು ಹಿಂಜರಿಯಬಹುದು. ಇಂತಹ ಕಾನೂನು ಮಾಡಿದರೆ ಮಹಿಳೆಯರ ಉದ್ಯೋಗಾವಕಾಶಗಳೇ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು. ಅಲ್ಲದೇ, ಜಾಗೃತಿ ಮೂಡಿಸುವುದು ಮತ್ತು ಸಂವೇದನೆ ಹೆಚ್ಚಿಸುವುದು ಬೇರೆ ವಿಷಯ. ಆದರೆ ಕಾನೂನಾಗಿ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಕ ಮಾಡದ ಪರಿಸ್ಥಿತಿ ಉಂಟಾಗಬಹುದು ಎಂದು ಎಚ್ಚರಿಕೆ ನೀಡಿರುತ್ತಾರೆ.

ಈ ವೇಳೆ ನ್ಯಾಯಮೂರ್ತಿ ಕೂಡಾ ಮಾತನಾಡಿ, ವ್ಯಾಪಾರ ದೃಷ್ಟಿಯಿಂದ ನೋಡಿದರೆ ಉದ್ಯೋಗದಾತರು ಹಲವಾರು ಅಂಶಗಳನ್ನು ಪರಿಗಣಿಸುತ್ತಾರೆ. ಉದ್ಯೋಗ ಮಾರುಕಟ್ಟೆಯ ವಾಸ್ತವ ಸ್ಥಿತಿಯನ್ನು ಕೂಡ ಗಮನಿಸಬೇಕು ಎಂದು ಹೇಳಿದರು. ಇದಕ್ಕೆ ಪ್ರತಿಯಾಗಿ ಹಿರಿಯ ವಕೀಲರೊಬ್ಬರು ಮಾತಾಡಿ, ಕೇರಳ ಸರ್ಕಾರವು 2013ರಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಮಹಿಳಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಿರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. ಆ ಸಮಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದು ಲಿಂಗ ಸಮಾನತೆ ಸಾಧಿಸುವ ದಿಕ್ಕಿನಲ್ಲಿ ತೆಗೆದುಕೊಂಡ ನಿರ್ಧಾರ ಎಂದು ಹೇಳಿದ್ದರು.

ಆದರೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಇವು ಸ್ವಯಂಪ್ರೇರಿತ ಕ್ರಮಗಳಾಗಿದ್ದು, ಕಾನೂನಾಗಿ ಕಡ್ಡಾಯ ಮಾಡಿದರೆ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಇದಕ್ಕೂ ಮುನ್ನ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಮಾಸಿಕ ಧರ್ಮ ಆರೋಗ್ಯವನ್ನು ಮಹಿಳೆಯರ ಜೀವನ, ಗೌರವ, ಆರೋಗ್ಯ ಮತ್ತು ಶಿಕ್ಷಣದ ಹಕ್ಕಿನ ಭಾಗ ಎಂದು ಗುರುತಿಸಿ ಮಹತ್ವದ ತೀರ್ಪು ನೀಡಿತ್ತು. ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವ ಮತ್ತು ಆರ್ ಮಹದೇವನ್ ನೇತೃತ್ವದ ಪೀಠವು ಸರ್ಕಾರಗಳು ಮಹಿಳೆಯರ ಮಾಸಿಕ ಆರೋಗ್ಯದ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತ್ತು. ನ್ಯಾಯಾಲಯವು ಸರ್ಕಾರಗಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್‌ಗಳ ವಿತರಣೆ, ಪ್ರತ್ಯೇಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಾಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಿದೆ.

Menstrual leave does not prevent women from getting jobs: Supreme Court – ತುಳು ಟೈಮ್ಸ್

ಇದನ್ನೂ ಓದಿ : ಇರಾನ್–ಇಸ್ರೇಲ್ ಯುದ್ಧದ ಪರಿಣಾಮ: ಭಾರತೀಯರ ಬೇಸಿಗೆ ಪ್ರವಾಸಕ್ಕೆ ಅಡಚಣೆ

========

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/-PlvbIZDxfU?si=16u4zDqFh1_lBN_I

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 149

You cannot copy content of this page