ಗುಂಡ್ಯ: Tulu Times | ರಾಜಹಂಸ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ಸಕಲೇಶಪುರದ ಬಳಿ ನಡೆದ ಮದುವೆಯ ರಿಸೆಪ್ಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಸನದಿಂದ ಉಜಿರೆ ಕಡೆಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಬೆಂಗಳೂರಿನ ಮೂಲಕ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕೊಕ್ಕಡದಲ್ಲಿ ಕಾರ್ಯಾಚರಿಸುತ್ತಿರುವ ಎಸ್.ಆರ್. ಆಯಿಲ್ ಮಿಲ್ ಉದ್ಯಮಿ ಹಾಗೂ ಶಿಶಿಲ ನಿವಾಸಿ ಚಂದ್ರಶೇಖರ ಗೌಡ (56), ಉಜಿರೆ ಗ್ರಾಮದ ಮರಕಡ ನಿವಾಸಿ ಹಾಗೂ ಕಕ್ಕಿಂಜೆ ಮಲ್ನಾಡ್ ಫೈನಾನ್ಸ್ ಮಾಲಕರಾಗಿರುವ ಕಾರು ಚಾಲಕ ಶ್ರೀಧರ ಗೌಡ (61), ಹಾಗೂ ಉಜಿರೆ ಗ್ರಾಮದ ಗುರಿಪಳ್ಳ ನಿವಾಸಿ ಜನಾರ್ಧನ ಗೌಡ ಎನ್ನಲಾಗಿದೆ.

ಕಾರಿನಲ್ಲಿ ಇದ್ದ ಮತ್ತೊಬ್ಬ ಪ್ರಯಾಣಿಕ ಉಜಿರೆಯ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
KSRTC Rajahamsa bus-car collision near Gundya: Three dead on the spot – ತುಳು ಟೈಮ್ಸ್
ಇದನ್ನೂ ಓದಿ : ಪುರುಷರಲ್ಲಿ ತಲೆ ಕೂದಲು ಉದುರುವಿಕೆಗೂ ಹೊಟ್ಟೆಯ ಆರೋಗ್ಯಕ್ಕೂ ಸಂಬಂಧವಿದೆಯೇ?
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/live/-PlvbIZDxfU?si=16u4zDqFh1_lBN_I











