Ullal: ರಸ್ತೆ ದಾಟುತ್ತಿದ್ದಾಗ ಲಾರಿ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅ.27ರ ಸೋಮವಾರ ಸಂಜೆ ರಾ.ಹೆ. 66 ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಎಂಬಲ್ಲಿ ನಡೆದಿದೆ.
ಸೋಮೇಶ್ವರದ ಪಿಲಾರು ಸರಕಾರಿ ಶಾಲಾ ಬಳಿಯ ನಿವಾಸಿ ರಾಮಚಂದ್ರ. ಬಿ (59) ಮೃತಪಟ್ಟವರು. ರಾಮಚಂದ್ರ ಅವರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ಉಳ್ಳಾಲದ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678
ಇದನ್ನೂ ಓದಿ: Montha Cyclone: ಆಂಧ್ರ, ಒಡಿಶಾಗೆ ಹೈ ಅಲರ್ಟ್ – ಶಿಕ್ಷಣ ಸಂಸ್ಥೆಗಳಿಗೆ 3 ದಿನ ರಜೆ
=======================================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











