ನವದೆಹಲಿ : Tulu Times l ದೇಶದಲ್ಲಿ ಮತ್ತೆ ಕೋವಿಡ್ ಕಾಲದಂತೆಯೇ ಲಾಕ್ಡೌನ್ ಜಾರಿಯಾಗಲಿದೆ ಎಂಬ ಗಾಳಿಸುದ್ದಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಭಾರತದಲ್ಲಿ ಲಾಕ್ಡೌನ್ ಜಾರಿಗೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ.
ಇದೀಗ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಲಾಕ್ಡೌನ್ ಕುರಿತ ಸುಳ್ಳು ಮಾಹಿತಿ ಹರಡುತ್ತಿದೆ. ಈ ಬಗ್ಗೆ ಮಾತನಾಡಿದ ಅವರು, ಭಾರತದಲ್ಲಿ ಲಾಕ್ಡೌನ್ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು. ಕೇಂದ್ರ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜನತೆಯ ಜೊತೆ ಮನವಿ ;
ಗಾಳಿಸುದ್ದಿಗಳಿಗೆ ನಂಬಿಕೆ ಇಡಬೇಡಿ, ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿ ಪಡೆದುಕೊಳ್ಳಿ, ಶಾಂತಿ, ಜವಾಬ್ದಾರಿ ಮತ್ತು ಏಕತೆ ಕಾಪಾಡಿಕೊಳ್ಳಿ. ಅಧಿಕಾರಿಗಳು ಕೂಡ ಜನರು ತಪ್ಪು ಮಾಹಿತಿಯನ್ನು ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ, ದೇಶದಲ್ಲಿ ಈಗ ಲಾಕ್ಡೌನ್ ಜಾರಿಗೆ ಯಾವುದೇ ಯೋಜನೆ ಇಲ್ಲ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.
Rumors about lockdown: Clarification from the Center – ತುಳುಟೈಮ್ಸ್
ಇದನ್ನೂ ಓದಿ :ಸರಳ ಆಹಾರದಲ್ಲೇ ಉತ್ತಮ ಆರೋಗ್ಯ ಅಡಗಿದೆ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/aDo_44I0S8Y?si=6BeHgj70wE2RF2hA











