ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

Belthangady: ಗೋಮಾಂಸ ಅಡ್ಡೆಗೆ ಪೊಲೀಸ್ ದಾಳಿ; ಇಬ್ಬರ ಬಂಧನ

Belthangady: ಇಂದಬೆಟ್ಟುವಿನ ಶೆಡ್ ನಲ್ಲಿ ಅಕ್ರಮವಾಗಿ ಗೋ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಜಾನುವಾರುಗಳನ್ನು ಕಳ್ಳತನ ಮಾಡಿ ಶೆಡ್ ಗೆ ತಂದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆದ್ರಬೆಟ್ಟು ನಿವಾಸಿ ಅಬ್ದುಲ್‌ ನಝೀರ್‌ (36) ಹಾಗೂ ಮಿತ್ತಬಾಗಿಲು ನಿವಾಸಿ ಝಕಾರಿಯ(36) ಬಂಧಿತ ಆರೋಪಿಗಳು.

ಶೆಡ್ ನಲ್ಲಿ ಹತ್ಯೆಗೆ ಬಳಸುತ್ತಿದ್ದ ಆಯುಧಗಳು,ಕೆಲವು ಸೊತ್ತುಗಳು ಹಾಗೂ ದನದ ಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿಸಿದ್ದಾರೆ. ಅ.27 ರಂದು ಮದ್ಯಾಹ್ನ 3 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಪ್ರಾರ್ಥನಾ ಮಂದಿರದ ಸಮೀಪ ಇರುವ ರಬ್ಬರ್ ತೋಟದ ಶೆಡ್ ಒಳಗಡೆ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಓಮನ ನೇತೃತ್ವದ ತಂಡ ಮದ್ಯಾಹ್ನ 3 ಗಂಟೆ ಸುಮಾರಿಗೆ ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭ ಶೆಡ್ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ 91 ಕೆ.ಜಿ. ದನದ ಮಾಂಸ ಮತ್ತು ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಮಾಂಸ ದಂಧೆಯಲ್ಲಿ ಸಕ್ರಿಯನಾಗಿದ್ದ ಬೆದ್ರಬೆಟ್ಟು ನಿವಾಸಿ ಉಸ್ಮಾನ್ ಎಂಬವರ ಪುತ್ರ ಅಬ್ದುಲ್ ನಝೀರ್(36) ಹಾಗೂ ಮಿತ್ತಬಾಗಿಲು ಗ್ರಾಮದ ಅಬ್ದುಲ್ ರಹುಮಾನ್ಎಂಬವರ ಪುತ್ರ ಝಕಾರಿಯಾ(36) ಎಂಬವರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ  ಅಧಿನಿಯಮ 2020 ಮತ್ತು ಕಲಂ 33(2) BNS 2023 ರಂತೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಂದ್ ಎಮ್. ಮತ್ತು ವೇಣೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಓಮನ ನೇತೃತ್ವದಲ್ಲಿಈ ಕಾರ್ಯಾಚರಣೆಯಲ್ಲಿ ನಡೆಯಿತು.

ಇದನ್ನೂ ಓದಿ: ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್, ಇಬ್ಬರು ಸಜೀವ ದಹನ

=====================================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 37

You cannot copy content of this page