ಬ್ರೇಕಿಂಗ್ ನ್ಯೂಸ್
ಬೆಳ್ತಂಗಡಿ

ಗೇರುಕಟ್ಟೆ : ಆಸ್ಪತ್ರೆ ದಾಖಲಾದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : Tulu Times l ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ, ಕುಟುಂಬ ಸದಸ್ಯರಿಗೆ ಹಾಗೂ ಗಾಯಾಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.

ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆಯಲ್ಲಿ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡವರಾಗಿದ್ದಾರೆ. ಒಬ್ಬಳು ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೊಬ್ಬಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದಾಳೆ. ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ ಎಂಬುವುದು ಮೂಲಗಳಿಂದ ತಿಳಿದು ಬಂದಿದೆ.

Gerukatte: MLA Harish Poonja inquires about the health of the female students admitted to the hospital – ತುಳುಟೈಮ್ಸ್

ಇದನ್ನೂ ಓದಿ :ಭೀಮ‌ ಗೋಲ್ಡ್ ಸಹಕಾರದಿಂದ ಬೈಂದೂರು ಸೇವಧಾಮದಲ್ಲಿ ನೀರಿನ ಘಟಕ ಉದ್ಘಾಟನೆ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/2AWkk7R62HI?si=_xQsScydX0_WlQYO

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 12

You cannot copy content of this page