ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರುಬಂಟ್ವಾಳ

Puttur: ಡಿವೈಡರ್‌ಗೆ ಕಾರು ಡಿಕ್ಕಿ – ಯುವಕ ಮೃತ್ಯು

Puttur: ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಗೊಂಡು ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಪಾಣೆಮಂಗಳೂರು ಫೈ ಓವರ್ ನಲ್ಲಿ ಘಟನೆ ನಡೆದಿದೆ. ಪುತ್ತೂರು ಕುದ್ಮಾರು ನಿವಾಸಿ ಕರುಣಾಕರ ಅವರ ಪುತ್ರ ಕಾರ್ತಿಕ್ (24) ಮೃತಪಟ್ಟ ಯುವಕ.

ಅ. 28ರ ರಾತ್ರಿ ಈ ಘಟನೆ ನಡೆದಿದೆ. ಪಾಣೆಮಂಗಳೂರು ಫೈ ಓವರ್ ಬಳಿ, ಮೂರು ಮಂದಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕನಸಿಗೆ ಭಯಗೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

===================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess   

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 35

You cannot copy content of this page