ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರುಬೆಳ್ತಂಗಡಿ

Uppinangady: ಕಳ್ಳತನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ – ಪ್ರಮುಖ ಸುಳಿವು ಪತ್ತೆ

Uppinangady: ಹಾಡಹಗಲೇ ಅಂಗಡಿಗೆ ನುಗ್ಗಿದ ಕಳ್ಳರು ಐದು ಲಕ್ಷ ನಗದು ಎಗರಿಸಿದ ಘಟನೆಗೆ ಸಂಬಂಧಿಸಿ ಪೊಲೀಸರಿಗೆ ಮಹತ್ತರ ಸುಳಿವು ಸಿಕ್ಕಿದೆ. ಗುಂಡಿಜೆ ಟ್ರೇಡರ್ಸ್‌ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು ತನಿಖೆಗೆ ಚುರುಕು ಸಿಕ್ಕಿದೆ.

ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದ ಉದ್ಯಮಿ ವಸಂತ್ ಗೌಡ ಮಾಲೀಕತ್ವದ ಗುಂಡಿಜೆ ಟ್ರೇಡರ್ಸ್‌ ಅಡಿಕೆ ಮತ್ತು ಕಾಡುತ್ಪತ್ತಿ ವ್ಯಾಪಾರದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಆಗ ಪ್ರಮುಖ ಸುಳಿವು ಸಿಕ್ಕಿದೆ ಎಂದು ವರದಿಯಾಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿರುವ ಅನುಮಾನಾಸ್ಪದ ಹಳೆಯ ಮೋಟಾರ್ ಸೈಕಲ್ ಈಗ ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣದಲ್ಲಿ ಕಂಡುಬಂದ ಬೈಕ್ ಕಳೆದ ತಿಂಗಳು ಬೆಳ್ತಂಗಡಿ ಬಳಿ ನಡೆದಿದ್ದ ಕಳ್ಳತನದಲ್ಲಿ ಭಾಗಿಯಾಗಿದ್ದ ಬೈಕ್ ಅನ್ನು ಹೋಲುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಬೆಳ್ತಂಗಡಿ ಹಾಗೂ ಉಪ್ಪಿನಂಗಡಿಯ ಕಳ್ಳತನದ ಹಿಂದೆ ಒಂದೇ ಗುಂಪಿನ ಕೈವಾಡವಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಈ ಸುಳಿವನ್ನು ಆಧಾರವಾಗಿರಿಸಿಕೊಂಡು ಪೊಲೀಸರು ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ: Puttur: ಡಿವೈಡರ್‌ಗೆ ಕಾರು ಡಿಕ್ಕಿ – ಯುವಕ ಮೃತ್ಯು

==============================================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 41

You cannot copy content of this page