ಸವಣೂರು : Tulu Times l ಶಿಕ್ಷಕರು ಮತ್ತು ಪೋಷಕರು ಶಿಕ್ಷಣ ಕ್ಷೇತ್ರದ ಎರಡು ಆಧಾರಸ್ತಂಭಗಳಿದ್ದಂತೆ ಅದರ ಮಹತ್ವ ಅರಿತು ಎಲ್ಲರೂ ಸಾಗಬೇಕಾಗಿದೆ. ಪದವಿ ಇದ್ದರೂ ಕೌಶಲ್ಯದ ಕೊರತೆಯಿಂದ ವಿದ್ಯಾರ್ಥಿಗಳು ಉದ್ಯೋಗ ಕ್ಷೇತ್ರದಲ್ಲಿ ನಿರಾಶೆಯನ್ನು ಅನುಭವಿಸುತ್ತಿರುವುದಕ್ಕೆ ಕಳವಳ ವ್ಯಕ್ತವಾಗುತ್ತಿದ್ದು, ಸಮಾಜದಲ್ಲಿ ಸ್ಥಿರ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿಲ್ ಎಲ್ ಶೆಟ್ಟಿ ಹೇಳಿದರು.
ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇಲ್ಲಿ ನಡೆದ ಶಿಕ್ಷಕ-ರಕ್ಷಕ ಸಂಘದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇವರು, ಇಂದು ಗುಣಮಟ್ಟದ ಶಿಕ್ಷಕರ ಕೊರತೆಯಿದ್ದು ಆ ನಿಟ್ಟಿನಲ್ಲಿಯೂ ಕೂಡ ಸುಧಾರಿಸಬೇಕಾಗಿದೆ. ಎಲ್ಲ ಪೋಷಕರಲ್ಲಿ ತಮ್ಮ ತಮ್ಮ ಮಕ್ಕಳನ್ನು ವಿದ್ಯಾರಶ್ಮಿಗೆ ಸೇರಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ರಾಜಲಕ್ಷ್ಮೀ ಎಸ್ ರೈ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಕಮ್ಮಿಯಾಗದಂತೆ ನೋಡಿಕೊಳ್ಳುವಂತೆ ಮನವಿಮಾಡಿದ್ದಲ್ಲದೇ ವಿಶ್ವವಿದ್ಯಾಲಯದ ಪರೀಕ್ಷಾ ಶುಲ್ಕವನ್ನು ಸರಿಯಾದ ಸಮಯದಲ್ಲಿ ಪಾವತಿಸುವಂತೆ ಆಗ್ರಹಿಸಿದರು.
ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ನಿಶಾಂತ್ ರಾವ್ 2024-2025 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಹಾಗೂ 2026-2027 ನೇ ಸಾಲಿನ ನೂತನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಸ್ಥಾನಕ್ಕೆ ಶಿಕ್ಷಕ-ರಕ್ಷಕರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು. ಪದವಿ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಲಾಯಿತು. ಅಲ್ಲದೇ ಕಾಲೇಜಿನಲ್ಲಿ ವಿಶಿಷ್ಟ ಸಾಧನೆಗೈದ ಮಕ್ಕಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಐಕ್ಯುಎಸಿ ಸಂಯೋಜಿಕಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಕೌಶಲ್ಯ ಆರ್., ಎಲ್ಲಾ ಬೋಧಕ ಭೋದಕೇತರ ವೃಂದ ಉಪಸ್ಥಿತರಿದ್ದು ತಮ್ಮ ಸ್ವಪರಿಚಯ ತಿಳಿಸಿ ಅಗತ್ಯ ಸಲಹೆ ಸೂಚನೆಗಳನ್ನು ತಿಳಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮನಾ ರಾವ್ ಕಾರ್ಯಕ್ರಮ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಹರ್ಷಿತಾ ಕೆ.ಎಸ್.ಧನ್ಯವಾದ ಸಮರ್ಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಗಿರೀಶ್ ಭಟ್.ಕೆ ಕಾರ್ಯಕ್ರಮ ನಿರೂಪಿಸಿದರು.
Sustainable change in society is possible only through education – ತುಳುಟೈಮ್ಸ್
ಇದನ್ನೂ ಓದಿ :ಬೇಸಿಗೆ ಕಾಲದಲ್ಲಿ ಮಕ್ಕಳ ಸುರಕ್ಷತೆ ಮತ್ತು ಆರೈಕೆ ಹೇಗೆ?
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/EYKaZkoL8Qk?si=HuMYNVpWuqgmdshz











