ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರುಬಂಟ್ವಾಳ

Bantwal: ಆಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿ – ವ್ಯಕ್ತಿಯ ಬಂಧನ

ಬಂಟ್ವಾಳ: ಸ್ಕೂಟರ್‌ ಸವಾರನೊಬ್ಬ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡದೆ ಹುಚ್ಚಾಟ ಮೆರೆದ ಘಟನೆ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಅಪಘಾತದ ಗಾಯಾಳುಗಳನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಅಡ್ಡಿಪಡಿಸಿದ್ದ ದ್ವಿಚಕ್ರ ಸವಾರನ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ದ್ವಿಚಕ್ರ ಸವಾರದ ದುರ್ವರ್ತನೆಗೆ ತಕ್ಕ ಪಾಠ ಕಲಿಸಬೇಕೆಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸ್ಕೂಟರ್ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು ತಾಲೂಕು ಬೆಟ್ಟಂಪಾಡಿ ನಿವಾಸಿ ಮನ್ಸೂರ್ (38) ಅಡ್ಡಿಪಡಿಸಿದ ಸ್ಕೂಟರ್‌ ಸವಾರ. ಅ. 30ರ ಗುರುವಾರದಂದು ಬಿ.ಸಿ. ರೋಡಿನಲ್ಲಿ ಘಟನೆ ನಡೆದಿದೆ. ಗುರುವಾರ ಬಿಸಿಲೆ ಘಾಟ್ ನಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು.

ಈ ವೇಳೆ ದ್ವಿಚಕ್ರ ವಾಹನ ಸವಾರ ಮನ್ಸೂರ್ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಕ್ರಮಾಂಕ 128/2025 ಕಲಂ 110, 125 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678

ಇದನ್ನೂ ಓದಿ: Karnataka Rajyothsava ಪ್ರಶಸ್ತಿ ಪ್ರಕಟ – ಇಲ್ಲಿದೆ ಲಿಸ್ಟ್‌

===========================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess  

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 35

You cannot copy content of this page