ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

Belthangady: ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Belthangady: ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ಮೊಸಳೆ ಪತ್ತೆಯಾಗಿದೆ. ನೇತ್ರಾವತಿ ನದಿಗೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇದರ ಪಕ್ಕದಲ್ಲೇ ಮೊಸಳೆ ಕಂಡುಬಂದಿದೆ.

ಅ.30ರಂದು ಸಂಜೆ ವೇಳೆ ಮರಳಿನ ದಿಬ್ಬದಲ್ಲಿ ಮೊಸಳೆ ವಿಶ್ರಾಂತಿ ಪಡೆಯುತ್ತಿರುವುದು ಕಂಡು ಬಂದಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರು ಮೊಸಳೆಯಿರುವ ಬಗ್ಗೆ ಅರಣ್ಯ ಇಲಾಖೆಗೂ ಮಾಹಿತಿ ನೀಡಿದ್ದಾರೆ. ನೇತ್ರಾವತಿ ಹಾಗೂ ಕುಮಾರಧಾರ ನದಿಗಳಲ್ಲಿ ಹಲವು ಕಡೆಗಳಲ್ಲಿ ಈಗಾಗಲೇ ಮೊಸಳೆಗಳು ಕಾಣಿಸಿಕೊಂಡಿದ್ದವು. ಆದ್ದರಿಂದ ನದಿಗಳಿಯುವವರು ಎಚ್ಚರಿಕೆ ವಹಿಸಬೇಕಾಗಿದೆ.

ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678

ಇದನ್ನೂ ಓದಿ: Panemangaluru: ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಪತ್ತೆ

===================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 37

You cannot copy content of this page