ಬ್ರೇಕಿಂಗ್ ನ್ಯೂಸ್
ಬೆಳ್ತಂಗಡಿ

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; ಪೊಲೀಸ್ ದಾಳಿ, ಮೂವರ ಬಂಧನ

ಬೆಳ್ತಂಗಡಿ : Tulu Times l ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ಕ್ಯಾಂಟೀನ್ ಹೆಸರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಜಾಲವನ್ನು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಕ್ಯಾಂಟೀನ್ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ ಹಾಗೂ ಗ್ರಾಹಕರಾದ ಉಸ್ಮಾನ್ ಮತ್ತು ಹೈದರ್ ಎಂದು ಗುರುತಿಸಲಾಗಿದೆ. ‘ಪವನ್ ಕ್ಯಾಂಟೀನ್’ನಲ್ಲಿ ಅಕ್ರಮ ವೇಶ್ಯಾವಾಟಿಕೆ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು, ಕಾರ್ಯಾಚರಣೆಯ ವೇಳೆ 29 ವರ್ಷದ ಮಹಿಳೆಯನ್ನು ರಕ್ಷಿಸಲಾಗಿದ್ದು, ಸ್ಥಳದಿಂದ ರೂ.5,000 ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿರುವುದು ವರದಿಯಾಗಿದೆ.

ಈ ಸಮಸ್ಯೆಯನ್ನು ತಡೆಯಲು ಕೇವಲ ಪೊಲೀಸ್ ಕ್ರಮ ಸಾಕಾಗುವುದಿಲ್ಲ. ಸಮಾಜದಲ್ಲಿ ಜಾಗೃತಿ ಮೂಡಿಸುವುದು, ಮಹಿಳೆಯರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶ ಕಲ್ಪಿಸುವುದು, ಸಂಕಷ್ಟದಲ್ಲಿರುವವರಿಗೆ ಪುನರ್ವಸತಿ ಸೌಲಭ್ಯ ಒದಗಿಸುವುದು ಹಾಗೂ ಮಾನವ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಸಮಾಜದ ಪ್ರತಿಯೊಬ್ಬರೂ ಮಹಿಳೆಯರ ಗೌರವ ಮತ್ತು ಸುರಕ್ಷತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವೇಶ್ಯಾವಾಟಿಕೆಯಂತಹ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದೆ, ಆರೋಗ್ಯಕರ ಮತ್ತು ಸುರಕ್ಷಿತ ಸಮಾಜ ನಿರ್ಮಾಣದತ್ತ ಎಲ್ಲರೂ ಕೈಜೋಡಿಸಬೇಕಾಗಿದೆ.

Belthangady: Prostitution racket in the name of canteen; Police raid, three arrested – ತುಳುಟೈಮ್ಸ್

ಇದನ್ನೂ ಓದಿ :ಮನೆಯಿಂದಲೇ ಕೆಲಸ ಮಾಡಿ, ಇಂಧನ ಉಳಿತಾಯ ಮಾಡಿ : ಪ್ರಧಾನಿ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=5bmDiTJcfKUli1SB

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page