ಕರ್ನಾಟಕ : Tulu Times l ಜಾಗತಿಕ ಅನಿಶ್ಚಿತತೆ ಹಾಗೂ ಇಂಧನ ಕೊರತೆಯ ಆತಂಕದ ನಡುವೆಯಲ್ಲಿ ಕರ್ನಾಟಕ ಸರ್ಕಾರ ಇಂಧನ ಪೂರೈಕೆ ಮತ್ತು ವಿತರಣೆಯ ಮೇಲಿನ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಬಾಟಲಿ, ಕ್ಯಾನ್ ಅಥವಾ ಇತರೆ ತೆರೆದ ಪಾತ್ರೆಗಳಲ್ಲಿ ಮಾರಾಟ ಮಾಡುವುದಕ್ಕೆ ನಿಷೇಧ ವಿಧಿಸಲಾಗಿದೆ.
ಇಂಧನದ ಅಕ್ರಮ ಸಂಗ್ರಹಣೆ ಮತ್ತು ದುರುಪಯೋಗ ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷವಾಗಿ ಕೃಷಿ ಮತ್ತು ಮೀನುಗಾರಿಕೆ ಚಟುವಟಿಕೆಗಳಿಗೆ ಡೀಸೆಲ್ ಪೂರೈಕೆ ಮಾಡುವ ಮೊದಲು ಸಂಬಂಧಿತ ಅಧಿಕಾರಿಗಳ ಮೂಲಕ ಅವಶ್ಯಕತೆಯನ್ನು ಪರಿಶೀಲಿಸಿ ಮಾತ್ರ ಅನುಮೋದನೆ ನೀಡಲಾಗುವುದು ಎಂದು ಸೂಚಿಸಲಾಗಿದೆ.

ರೈತರಿಗೆ ಕೊರತೆ ಉಂಟಾಗದಂತೆ ಕ್ರಮ; ಚಾಲ್ತಿಯಲ್ಲಿರುವ ಕೃಷಿ ಹಂಗಾಮಿನಲ್ಲಿ ರೈತರಿಗೆ ಡೀಸೆಲ್ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ರೈತರಿಗೆ ಅಗತ್ಯ ಪ್ರಮಾಣದ ಇಂಧನ ಸಮಯಕ್ಕೆ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಇಂಧನ ವಿತರಣೆಯ ಮೇಲ್ವಿಚಾರಣೆ ನಡೆಸುವಂತೆ ಹಾಗೂ ಹೊಸ ನಿಯಮಗಳು ಸಮರ್ಪಕವಾಗಿ ಜಾರಿಯಾಗುವಂತೆ ಸೂಚನೆ ನೀಡಲಾಗಿದೆ. ಜಾಗತಿಕ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಇಂಧನ ಭದ್ರತಾ ಆತಂಕ, ಸರಬರಾಜು ವ್ಯತ್ಯಯ ಮತ್ತು ಬೆಲೆ ಅಸ್ಥಿರತೆಯ ನಡುವೆಯಲ್ಲಿ ದೇಶದ ಹಲವು ರಾಜ್ಯಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ಕರ್ನಾಟಕದ ಈ ಕ್ರಮ ಮಹತ್ವದ್ದಾಗಿದೆ.
Petrol, diesel cannot be stored in cans/bottles anymore: Fuel supply rules strict in Karnataka – ತುಳುಟೈಮ್ಸ್
ಇದನ್ನೂ ಓದಿ :ಮೇ 3, 2026 ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/4pEuD7fDOuo?si=di3xXoCXfz_Sms6F











