ಬ್ರೇಕಿಂಗ್ ನ್ಯೂಸ್
ಬೆಳ್ತಂಗಡಿ

ಬೆಳಾಲು ಗ್ರಾಮದ ಮೂಕುತ್ತಿ ಮಜಲು, ನಾಗಕಲ್ಲು : ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ

ಬೆಳ್ತಂಗಡಿ : Tulu Times l ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಠಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಯಿಂದ ಸ್ಥಳೀಯ ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದರ ಜೊತೆಗೆ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎನ್ನಲಾಗಿದೆ.

Mookutti Majalu, Nagakallu, Belalu village: Rs. 5 crore grant for construction of bridge – ತುಳುಟೈಮ್ಸ್

ಇದನ್ನೂ ಓದಿ :32 ಕಿ.ಮೀ ಸಮುದ್ರ ಈಜಿ ಇತಿಹಾಸ ನಿರ್ಮಿಸಿದ ಈ ದಂಪತಿ ಯಾರು?

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=BuAuFFXHZiCDuPeD

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page