ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮೇ 13ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಕರ್ನಾಟಕ : Tulu Times l ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕದಲ್ಲಿ ಮೇ 13ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಬಂಗಾಳ ಕೊಲ್ಲಿಯಲ್ಲಿ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ವ್ಯವಸ್ಥೆಯ ಪ್ರಭಾವದಿಂದ ಕರ್ನಾಟಕ ಕರಾವಳಿ ಭಾಗಗಳು, ಕೇರಳ ಹಾಗೂ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮೇ 15ರಿಂದ ಅರಬ್ಬೀ ಸಮುದ್ರ ಹಾಗೂ ಹಿಂದೂ ಮಹಾಸಾಗರ ಭಾಗದಲ್ಲಿ ನೈಋತ್ಯ ಮುಂಗಾರು ಗಾಳಿಗಳು ಬಲ ಪಡೆಯಲಿದ್ದು, ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆಯ ಚಟುವಟಿಕೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ವರ್ಷ ಕರಾವಳಿ ಭಾಗಕ್ಕೆ ನೈಋತ್ಯ ಮುಂಗಾರು ಸಾಮಾನ್ಯಕ್ಕಿಂತ ಸ್ವಲ್ಪ ಮುಂಚೆಯೇ ಪ್ರವೇಶಿಸುವ ಲಕ್ಷಣಗಳು ಗೋಚರಿಸುತ್ತಿವೆ ಎನ್ನಲಾಗಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಕರಾವಳಿ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Heavy rain likely in coastal districts from May 13 – ತುಳುಟೈಮ್ಸ್

ಇದನ್ನೂ ಓದಿ :ಬೆಳಾಲು ಗ್ರಾಮದ ಮೂಕುತ್ತಿ ಮಜಲು, ನಾಗಕಲ್ಲು : ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=hKL2HE6saM0Kx5QW

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 169

You cannot copy content of this page