ದೆಹಲಿ : Tulu Times l ನವದೆಹಲಿಯಲ್ಲಿ ಖಾಸಗಿ ಬಸ್‌ನೊಳಗೆ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಘಟನೆ ಸೋಮವಾರ ರಾತ್ರಿ ರಾಣಿ ಬಾಗ್ ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆ ಮಂಗೋಲ್ಪುರಿಯ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕೆಯಾಗಿ ಕೆಲಸ ಮಾಡುತ್ತಿದ್ದು, ಪಿತಾಂಪುರದ ಸ್ಲಂ ಪ್ರದೇಶದಲ್ಲಿ ವಾಸಿಸುತ್ತಿದ್ದಳು.

ಮಹಿಳೆಯ ದೂರಿನ ಪ್ರಕಾರ, ಅವರು ಸರಸ್ವತಿ ವಿಹಾರ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ, ಇಬ್ಬರು ಆರೋಪಿಗಳು ಬಲವಂತವಾಗಿ ಖಾಸಗಿ ಬಸ್ ಒಳಗೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ದೆಹಲಿ ಪೋಲಿಸ್ ಪ್ರಕರಣ ದಾಖಲಿಸಿಕೊಂಡಿದ್ದು, ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಬಸ್‌ನ್ನೂ ವಶಕ್ಕೆ ಪಡೆಯಲಾಗಿದೆ.
ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಲೈಂಗಿಕ ದೌರ್ಜನ್ಯದ ಗುರುತುಗಳು ದೃಢಪಟ್ಟಿರುವುದಾಗಿ ವರದಿಯಾಗಿದೆ. ಘಟನೆ ನಡೆದ ಪ್ರದೇಶದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Woman gang-raped in private bus in Delhi – ತುಳುಟೈಮ್ಸ್
ಇದನ್ನೂ ಓದಿ :ಕೇರಳ ಮುಖ್ಯಮಂತ್ರಿ ಆಗಿ ವಿ.ಡಿ. ಸತೀಶನ್ ಆಯ್ಕೆ: ಕೆಸಿ ವೇಣುಗೋಪಾಲ್‌ಗೆ ಹಿನ್ನಡೆ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/4pEuD7fDOuo?si=yhi2JgjVhxHPgEiY











