ಬ್ರೇಕಿಂಗ್ ನ್ಯೂಸ್
ಕರ್ನಾಟಕ

Chikkamagaluru: ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ

Chikkamagaluru: ಹಸುವಿನ ಕೊಟ್ಟಿಗೆಗೆ ಸೊಪ್ಪು ತರಲೆಂದು ಅರಣ್ಯ ತೆರಳಿದ್ದಾಗ, ಕಾಡಾನೆಯೊಂದು ದಾಳಿ ನಡೆಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಅಕ್ಟೋಬರ್‌ 31ರಂದು ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ.

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ದುರಂತ ಸಂಭವಿಸಿದೆ. ಉಮೇಶ್ ಮತ್ತು ಹರೀಶ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಉಮೇಶ್‌ ಹಾಗೂ ಹರೀಶ್‌ ಇಬ್ಬರೂ ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಎದುರಾದ ಕಾಡಾನೆ, ಇಬ್ಬರ ಮೇಲೂ ದಾಳಿ ನಡೆಸಿ ಅವರನ್ನು ಕೊಂದುಹಾಕಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದ್ದು, ಸ್ಥಳೀಯರು ಮತ್ತು ರೈತ ಸಮಿತಿಗಳು ಪ್ರತಿಭಟನೆಗೆ ಕರೆ ನೀಡಿವೆ. ಈ ದುರಂತದಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Bahubali ರಿ-ರಿಲೀಸ್‌; ಬಾಕ್ಸ್‌ ಆಫೀಸ್‌ನಲ್ಲಿ ಮತ್ತೆ ದಾಖಲೆ

===============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess  

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page