ಬ್ರೇಕಿಂಗ್ ನ್ಯೂಸ್
ಕರ್ನಾಟಕ

ದುಬಾರೆ ದುರಂತದ ಬಳಿಕ ಕಟ್ಟುನಿಟ್ಟಿನ ನಿಯಮ : ಸಾಕಾನೆಗಳಿಗೆ ಆಹಾರ ನೀಡುವುದು ನಿಷೇಧ

ಕುಶಾಲನಗರ : Tulu Times l ದುಬಾರೆ ಆನೆ ಕ್ಯಾಂಪ್ ನಲ್ಲಿ ನಡೆದ ದಾರುಣ ಘಟನೆ ಬಳಿಕ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿದೆ. ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ್ ಬಿ. ಖಂಡ್ರೆ ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿ, ಈ ದುರಂತವು ಅತ್ಯಂತ ಆಘಾತಕಾರಿ ಎಂದು ತಿಳಿಸಿದ್ದಾರೆ. ಜೊತೆಗೆ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ತಮಿಳುನಾಡಿನ 33 ವರ್ಷದ ತುಳಸಿ ಎಂದು ಗುರುತಿಸಲಾಗಿದೆ. ಅವರು ಕಾವೇರಿ ನದಿಯ ತೀರದಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ದೃಶ್ಯ ವೀಕ್ಷಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಈ ಘಟನೆ ಪ್ರವಾಸಿಗರಲ್ಲಿ ಭೀತಿಯನ್ನು ಉಂಟುಮಾಡಿದ್ದು, ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ಘಟನೆಯ ಬಳಿಕ ರಾಜ್ಯ ಸರ್ಕಾರ ದುಬಾರೆ ಸೇರಿದಂತೆ ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಪ್ರವಾಸಿಗರು ಆನೆಗಳು ಮತ್ತು ಇತರೆ ಕಾಡುಪ್ರಾಣಿಗಳಿಂದ ನಿಗದಿತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಹೊಸ ನಿಯಮಗಳ ಪ್ರಕಾರ, ಯಾವುದೇ ಸಂದರ್ಭದಲ್ಲೂ ಪ್ರವಾಸಿಗರಿಗೆ ಆನೆಗಳ ಹತ್ತಿರ ಹೋಗಲು ಅವಕಾಶ ಇರುವುದಿಲ್ಲ. ಆನೆಗಳ ಸೊಂಡಿಲು ಮುಟ್ಟುವುದು ಅಥವಾ ಅವುಗಳೊಂದಿಗೆ ನೇರ ಸಂಪರ್ಕ ಸಾಧಿಸುವುದಕ್ಕೂ ನಿಷೇಧ ವಿಧಿಸಲಾಗಿದೆ.

ಆನೆಗಳ ಬಳಿ ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನೂ ಸರ್ಕಾರ ನಿರ್ಬಂಧಿಸಿದೆ. ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಅಥವಾ ತೊಳೆಯಲು ಸಹಾಯ ಮಾಡುವ ಚಟುವಟಿಕೆಗಳಿಗೂ ಇನ್ನು ಅವಕಾಶ ಇರುವುದಿಲ್ಲ. ಬೆಲ್ಲ, ಬಾಳೆಹಣ್ಣು ಸೇರಿದಂತೆ ಯಾವುದೇ ಆಹಾರ ಪದಾರ್ಥಗಳನ್ನು ಆನೆಗಳಿಗೆ ನೀಡುವುದನ್ನು ನಿಷೇಧಿಸಲಾಗಿದೆ. ‘ತರಬೇತಿ ಪಡೆದ ಆನೆಗಳೂ ಕೆಲವೊಮ್ಮೆ ಅನಿರೀಕ್ಷಿತವಾಗಿ ವರ್ತಿಸಬಹುದು. ಆದ್ದರಿಂದ ಸಾರ್ವಜನಿಕ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯ, ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ. ಹೊಸ ನಿಯಮಗಳಿಂದ ಭವಿಷ್ಯದಲ್ಲಿ ಇಂತಹ ದುರ್ಘಟನೆಗಳನ್ನು ತಪ್ಪಿಸಲು ಹಾಗೂ ರಾಜ್ಯದ ವನ್ಯಜೀವಿ ಪ್ರವಾಸೋದ್ಯಮವನ್ನು ಇನ್ನಷ್ಟು ಸುರಕ್ಷಿತವಾಗಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Strict rules after Dubare disaster: Feeding livestock banned – ತುಳುಟೈಮ್ಸ್

ಇದನ್ನೂ ಓದಿ :ಅಗತ್ಯ ಔಷಧಿಗಳ ಬೆಲೆ ಏರಿಕೆ: ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆ

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://www.youtube.com/live/4pEuD7fDOuo?si=4Bd3KJCwcF3hXUwj

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 174

You cannot copy content of this page