ಪದ್ಮಶ್ರೀ : Tulu Times l ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ ಪ್ರಶಸ್ತಿ, ಪದ್ಮ ಭೂಷಣ, ಪದ್ಮವಿಭೂಷಣ ಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಮೊದಲ ನಾಗರಿಕ ಗೌರವ ಸಮಾರಂಭದಲ್ಲಿ ಪ್ರದಾನ ಮಾಡಿದರು. ಗಣತಂತ್ರ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿ Cಸಿ.ಪಿ ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದಿ ಚಿತ್ರರಂಗದ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ನಟಿ ಹಾಗೂ ಧರ್ಮೇಂದ್ರ ಅವರ ಪತ್ನಿ ಹೇಮಮಾಲಿನಿ ಸ್ವೀಕರಿಸಿದರು. ಭಾರತೀಯ ಸಿನೆಮಾಕ್ಕೆ ಧರ್ಮೇಂದ್ರ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿ ಈ ಗೌರವ ನೀಡಲಾಗಿದೆ. ಇನ್ನು ಪ್ರಸಿದ್ಧ ವಯಲಿನ್ ವಾದಕಿ ಎನ್ ರಾಜಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನಿಸಲಾಯಿತು. ಅಲ್ಲದೇ, ಮಂಡ್ಯದಲ್ಲಿ ವಿಶ್ವದ ಅತಿದೊಡ್ಡ ಉಚಿತ ಗ್ರಂಥಾಲಯವನ್ನು ಸ್ಥಾಪಿಸಿದ ಮಾಜಿ ಬಸ್ ಕಂಡಕ್ಟರ್, ಪುಸ್ತಕ ಪ್ರೇಮಿ ಅಂಕೇಗೌಡರೂ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ.

ಈ ಮೊದಲ ಸಮಾರಂಭದಲ್ಲಿ: 2 ಪದ್ಮ ವಿಭೂಷಣ, 6 ಪದ್ಮ ಭೂಷಣ, 58 ಪದ್ಮ ಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳಿಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ಅದರಲ್ಲಿವೆ: 5 ಪದ್ಮ ವಿಭೂಷಣ, 13 ಪದ್ಮ ಭೂಷ, 113 ಪದ್ಮ ಶ್ರೀ ಪ್ರಶಸ್ತಿಗಳು. ಉಳಿದ ಪ್ರಶಸ್ತಿಗಳನ್ನು ಮುಂದಿನ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿವೆ. ಈ ಪ್ರಶಸ್ತಿಗಳನ್ನು: ಕಲೆ, ಸಮಾಜ ಸೇವೆ, ಸಾಹಿತ್ಯ ಮತ್ತು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ, ಕ್ರೀಡೆ, ಸಾರ್ವಜನಿಕ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ. ಪದ್ಮ ಪ್ರಶಸ್ತಿಗಳು ದೇಶಕ್ಕೆ ಸೇವೆ ಸಲ್ಲಿಸಿದ ವ್ಯಕ್ತಿಗಳ ಸಾಧನೆ ಮತ್ತು ಕೊಡುಗೆಯನ್ನು ಗೌರವಿಸುವ ಸಂಕೇತವಾಗಿವೆ. ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸುವ ಮೂಲಕ ದೇಶ ಅವರ ಸಾಧನೆಯನ್ನು ಸ್ಮರಿಸಿ ಮುಂದಿನ ಪೀಳಿಗೆಗೆ ಪ್ರೇರಣೆಯಾಗುವ ಸಂದೇಶ ನೀಡುತ್ತದೆ.
Padma Awards presented at Rashtrapati Bhavan: Dharmendra to be awarded Padma Vibhushan posthumously – ತುಳು ಟೈಮ್ಸ್
ಇದನ್ನೂ ಓದಿ : ಎಬೋಲಾ ಆತಂಕದ ನಡುವೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/live/4pEuD7fDOuo?si=NM0tBe15Cbzi85Bp











