ಬ್ರೇಕಿಂಗ್ ನ್ಯೂಸ್
ಕ್ರೀಡೆ

ಸತತ ಎರಡನೇ ಬಾರಿ ಚಾಂಪಿಯನ್ : ಇತಿಹಾಸ ನಿರ್ಮಿಸಿದ ಆರ್‌ಸಿಬಿ

ಅಹಮದಾಬಾದ್: Tulu Times l ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ 2026 ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಜಯ ಸಾಧಿಸಿ ಐಪಿಎಲ್ ಟ್ರೋಫಿಯನ್ನು ಯಶಸ್ವಿಯಾಗಿ ಉಳಿಸಿಕೊಂಡ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

156 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನ ನೀಡಿದರು. ಫೈನಲ್‌ಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಿಂಚಿಲ್ಲ ಎಂಬ ಟೀಕೆಗಳನ್ನು ಹಿಂದೆ ತಳ್ಳಿ, ಈ ಬಾರಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.

ಬೌಲಿಂಗ್ ವಿಭಾಗದಲ್ಲಿ ರಸಿಖ್ ಸಲಾಂ 27 ರನ್ ನೀಡಿ 3 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದರು. ಜೋಶ್ ಹೇಜಲ್‌ವುಡ್ ಆರಂಭದಲ್ಲೇ ಗುಜರಾತ್ ನಾಯಕ ಶುಭಮನ್ ಗಿಲ್ ಅವರನ್ನು ಔಟ್ ಮಾಡುವ ಮೂಲಕ ಎದುರಾಳಿಗಳ ಮೇಲೆ ಒತ್ತಡ ಹೆಚ್ಚಿಸಿದರು. ಪರಿಣಾಮವಾಗಿ ಗಿಲ್ ಹಾಗೂ ಸಾಯಿ ಸುದರ್ಶನ್ ಸೇರಿದಂತೆ ಗುಜರಾತ್‌ನ ಪ್ರಮುಖ ಬ್ಯಾಟರ್‌ಗಳು ಪವರ್‌ಪ್ಲೇಯಲ್ಲೇ ದೊಡ್ಡ ಮೊತ್ತ ಕಲೆಹಾಕಲು ವಿಫಲರಾದರು.

2025ರಲ್ಲಿ ತನ್ನ ಮೊದಲ ಐಪಿಎಲ್ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೊದಲ ಫ್ರಾಂಚೈಸಿಯಾಗಿ ದಾಖಲೆ ಬರೆದಿದೆ. ತಂಡದ ಈ ಸಾಧನೆ ಅಭಿಮಾನಿಗಳಲ್ಲಿ ಸಂಭ್ರಮದ ಅಲೆ ಎಬ್ಬಿಸಿದೆ.

ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ₹20 ಕೋಟಿ ಬಹುಮಾನ ದೊರಕಿದರೆ, ರನ್ನರ್-ಅಪ್ ಗುಜರಾತ್ ಟೈಟನ್ಸ್ ತಂಡ ₹12.5 ಕೋಟಿ ಬಹುಮಾನ ಪಡೆದಿದೆ. ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ವಿಜೇತರಿಗೆ ತಲಾ ₹10 ಲಕ್ಷ ನಗದು ಬಹುಮಾನ ನೀಡಲಾಯಿತು. ಐಪಿಎಲ್ 2026ರ ಸಂಪೂರ್ಣ ಟೂರ್ನಿಯಲ್ಲೂ ಆರ್‌ಸಿಬಿ ಪ್ರಾಬಲ್ಯ ಮೆರೆದಿತ್ತು. ಕ್ವಾಲಿಫೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 92 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಆರ್‌ಸಿಬಿ, ಟೂರ್ನಿಯ ಅತ್ಯಂತ ಬಲಿಷ್ಠ ತಂಡವಾಗಿ ಹೊರಹೊಮ್ಮಿ ಅಂತಿಮವಾಗಿ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿತು.

RCB creates history as champions for second consecutive time -ತುಳುಟೈಮ್ಸ್

ಇದನ್ನೂ ಓದಿ :ಎಐ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಾಗ ಚೈತನ್ಯ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/FXmfYhIN-Tc?si=at6Wn4ctZF_a0upb

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 6

You cannot copy content of this page