ಬ್ರೇಕಿಂಗ್ ನ್ಯೂಸ್
ಕರಾವಳಿ

ಶಾಲೆಯಲ್ಲಿ ಒಣಕಸ ಸುಡುವಾಗ ಸ್ಫೋಟ, ಮುಖ್ಯ ಶಿಕ್ಷಕರ ಅಮಾನತು

ಉಡುಪಿ: Tulu Times l ಉಡುಪಿ ಜಿಲ್ಲೆಯ ಕುಕ್ಕುಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಣ ಕಸವನ್ನು ಸುಡುವ ವೇಳೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ಮಾಹಿತಿಯ ಪ್ರಕಾರ, ಶಾಲಾ ಆವರಣದಲ್ಲಿ ಸಂಗ್ರಹಿಸಲಾಗಿದ್ದ ಒಣ ಕಸವನ್ನು ಸುಡಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿತ್ತು. ಕಸಕ್ಕೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಅದರೊಳಗಿದ್ದ ವಸ್ತುವೊಂದು ಏಕಾಏಕಿ ಸ್ಫೋಟಗೊಂಡಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಶಾಲೆಯ ಮುಖ್ಯ ಶಿಕ್ಷಕ ದಯಾನಂದ ನಾಯಕ್ ಅವರನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅವರ ನಿರ್ದೇಶನದಂತೆ, ಉಡುಪಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅಮಾನತು ಆದೇಶ ಹೊರಡಿಸಿದ್ದಾರೆ.

ಈ ಘಟನೆ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತಾಗಿ ಹಲವು ಪ್ರಶ್ನೆಗಳನ್ನು ಎಬ್ಬಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Explosion while burning dry waste at school, head teacher suspended – ತುಳು ಟೈಮ್ಸ್

ಇದನ್ನೂ ಓದಿ : ಕರ್ನಾಟಕದಲ್ಲಿ ರೌಡಿಶೀಟರ್‌ಗಳ ವಿರುದ್ಧ ರಾಜ್ಯವ್ಯಾಪಿ ಕಾರ್ಯಾಚರಣೆ: ವಿಶೇಷ ಸ್ಕ್ವಾಡ್ ರಚನೆ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/xI868u7lWtY?si=i372iy4gg17ZzHtB

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 31

You cannot copy content of this page