ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಾವು, 15ಕ್ಕೂ ಹೆಚ್ಚು ಮಂದಿ ರಕ್ಷಣೆ

ಮೈಸೂರು: Tulu Times l ಮೈಸೂರು ನಗರದ ಪಬ್ ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬೆಂಕಿ ಕ್ಷಣಾರ್ಧದಲ್ಲಿ ಪಬ್‌ನಾದ್ಯಂತ ವ್ಯಾಪಿಸಿ ಕಟ್ಟಡವನ್ನು ಸಂಪೂರ್ಣವಾಗಿ ಸುಟ್ಟು ಭಸ್ಮಗೊಳಿಸಿದೆ. ಮೃತಪಟ್ಟಿರುವ ಇಬ್ಬರು ಪಬ್‌ನ ಸಿಬ್ಬಂದಿಯಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಪಬ್‌ನೊಳಗೆ ಸಿಲುಕಿಕೊಂಡಿದ್ದ 15ಕ್ಕೂ ಹೆಚ್ಚು ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಗ್ಯಾಸ್ ಸಿಲಿಂಡರ್ ಸ್ಫೋಟವೇ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪೊಲೀಸರು ಹಾಗೂ ಸಂಬಂಧಿತ ಇಲಾಖೆಗಳು ತನಿಖೆ ಮುಂದುವರಿಸಿವೆ.

Massive fire breaks out at Mysore pub: Two dead, over 15 rescued – ತುಳು ಟೈಮ್ಸ್

ಇದನ್ನೂ ಓದಿ : ಮಂಗಳೂರಿನ ಸಮೀಪ ಬಸ್‌ನಿಂದ ನಿರ್ಮಿತ ಬಸ್ ನಿಲ್ದಾಣ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtube.com/shorts/VbnXwmEuYug?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 185

You cannot copy content of this page