ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ ಸಮೀಪದ ಮುರುಳ್ಯದಲ್ಲಿ ಹೃದಯವಿದ್ರಾವಕ ದುರಂತ

ಸುಳ್ಯ: Tulu Times l ಸುಳ್ಯ ಸಮೀಪದ ಮುರುಳ್ಯ ಗ್ರಾಮದ ಕಡೀರದಲ್ಲಿ ಶನಿವಾರ (ಜೂನ್ 20) ನಡೆದ ದಾರುಣ ಘಟನೆಯಲ್ಲಿ ಮನೆಯ ಸಮೀಪದಲ್ಲಿರುವ ಕೆರೆಯೊಂದಕ್ಕೆ ಇಬ್ಬರು ಅವಳಿ ಮಕ್ಕಳು ಬಿದ್ದು ಮೃತಪಟ್ಟಿದ್ದಾರೆ. ಮೃತ ಮಕ್ಕಳನ್ನು ಕಡೀರ ನಿವಾಸಿ, ವೆಲ್ಡಿಂಗ್ ವೃತ್ತಿ ನಡೆಸುತ್ತಿರುವ ವಸಂತ ಅವರ ಪುತ್ರರಾದ ಯಶ್ವಿನ್ ಮತ್ತು ಜಶ್ವಿನ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಮಕ್ಕಳು ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮೀಪದ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಕೆಲ ಸಮಯದ ಬಳಿಕ ಮಕ್ಕಳು ಕಾಣಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದು, ಬಳಿಕ ಕೆರೆಯಲ್ಲಿ ಮಕ್ಕಳು ಬಿದ್ದಿರುವುದು ಪತ್ತೆಯಾಗಿದೆ.

ತಕ್ಷಣವೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರು ಮಕ್ಕಳನ್ನು ಕೆರೆಯಿಂದ ಮೇಲಕ್ಕೆತ್ತಿದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ದುರಂತದ ಸುದ್ದಿ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣವನ್ನು ಉಂಟುಮಾಡಿದೆ. ಅವಳಿ ಮಕ್ಕಳ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸ್ಥಳೀಯ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Heartbreaking tragedy in Muralya near Sullia: Twins die after falling into lake – ತುಳು ಟೈಮ್ಸ್

ಇದನ್ನೂ ಓದಿ : ಹಿಂದಿನ ಜನ್ಮದಲ್ಲಿ ನೀವು ಎಲ್ಲಿದ್ರಿ? ಇದೇನಿದು ಪಾಸ್ಟ್ ಲೈಫ್ ಸೀಕ್ರೆಟ್

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/iEAJAlB-lpg?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 8

You cannot copy content of this page