ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಪ್ರಿಯಕರನ ಬಂಧನಕ್ಕೆ ಆಕ್ರೋಶ; ಟವರ್ ಏರಿ ಹೈಡ್ರಾಮಾ ನಡೆಸಿದ ಅಪ್ರಾಪ್ತೆ

ಜಾರ್ಖಂಡ್: Tulu Times l ಪ್ರಿಯಕರನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ 17 ವರ್ಷದ ಅಪ್ರಾಪ್ತ ಬಾಲಕಿ 100 ಅಡಿ ಎತ್ತರದ ಮೊಬೈಲ್ ಟವರ್ ಏರಿದ ಘಟನೆ ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, 22 ವರ್ಷದ ಪ್ರಿಯಕರನನ್ನು ಕೆಲ ದಿನಗಳ ಹಿಂದೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಯುವಕನಿಗೆ ನ್ಯಾಯಾಂಗ ಬಂಧನ ;

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಇದರಿಂದ ಆಕ್ರೋಶಗೊಂಡ ಬಾಲಕಿ, 100 ಅಡಿ ಎತ್ತರದ ಮೊಬೈಲ್ ಟವರ್ ಏರಿ, ನನ್ನ ಪ್ರಿಯಕರನನ್ನು ಬಿಡುಗಡೆ ಮಾಡದಿದ್ದರೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳು ಧಾವಿಸಿ ಬಾಲಕಿಯನ್ನು ಸಮಾಧಾನಪಡಿಸಿ ಸುರಕ್ಷಿತವಾಗಿ ಕೆಳಗಿಳಿಸಲು ಪ್ರಯತ್ನ ನಡೆಸಿದರು. ಪೊಲೀಸರ ಪ್ರಕಾರ, ಜೂನ್ 18ರಂದು ಬಾಲಕಿಯ ತಾಯಿ ತನ್ನ ಪುತ್ರಿಯನ್ನು ಯುವಕ ಅಪಹರಿಸಿದ್ದಾನೆ ಎಂದು ದೂರು ನೀಡಿದ್ದರು. ಬಳಿಕ ಪೊಲೀಸರು ಇಬ್ಬರನ್ನೂ ರಾಂಚಿಯ ಸುಖದೇವ್ ನಗರ ಪ್ರದೇಶದಲ್ಲಿ ಪತ್ತೆಹಚ್ಚಿದರು. ಬಾಲಕಿಯನ್ನು ರಕ್ಷಿಸಿ, ಯುವಕನನ್ನು ಬಂಧಿಸಲಾಯಿತು.

ಪ್ರಸ್ತುತ ಆರೋಪಿಯಾಗಿರುವ ಯುವಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಸಾಕಷ್ಟು ಆತಂಕಕ್ಕೆ ಕಾರಣವಾಗಿದ್ದು, ಬಾಲಕಿಯನ್ನು ಸುರಕ್ಷಿತವಾಗಿ ಕೆಳಗಿಳಿಸಲು ಅಧಿಕಾರಿಗಳು ಸತತ ಪ್ರಯತ್ನ ನಡೆಸಿದ್ದಾರೆ.

Outrage over boyfriend’s arrest; Minor commits hydrama by climbing tower – ತುಳುಟೈಮ್ಸ್

ಇದನ್ನೂ ಓದಿ :ದಾಖಲೆಗಳಲ್ಲೇ ಮುಳುಗಿದ ಶಿಕ್ಷಕರು; ವಿದ್ಯಾರ್ಥಿಗಳ ಕಲಿಕೆಗೆ ಹೊಡೆತ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtube.com/shorts/GISneCqx6HU?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page