ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಪ್ರಕ್ರಿಯೆ; ಯಾರು ಅರ್ಹರು, ಯಾರು ಅನರ್ಹರು?

ಬೆಂಗಳೂರು: Tulu Times l ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಮಹಿಳೆಯರಿಗೆ ಮತ್ತೊಮ್ಮೆ ಅವಕಾಶ ಸಿಗುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರವು ಯೋಜನೆಯ ಅರ್ಜಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲು ಸಿದ್ಧತೆ ನಡೆಸಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊಸ ಅರ್ಜಿ ಪ್ರಕ್ರಿಯೆಯ ಅಂತಿಮ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಈ ಬಾರಿ ಗ್ರಾಮೀಣ ಪ್ರದೇಶದ, ಬಡ ಹಾಗೂ ಡಿಜಿಟಲ್ ಸೇವೆಗಳ ಬಳಕೆ ತಿಳಿದಿರದ ಮಹಿಳೆಯರಿಗೂ ಸುಲಭವಾಗಿ ಅರ್ಜಿ ಸಲ್ಲಿಸಲು ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ.

ಹೊಸ ವ್ಯವಸ್ಥೆಯಡಿ ಅಂಗನವಾಡಿ ಕಾರ್ಯಕರ್ತೆಯರ ಮೊಬೈಲ್‌ಗಳಿಗೆ ವಿಶೇಷ ಆ್ಯಪ್ ಅಳವಡಿಸಲಾಗುತ್ತದೆ. ಇದರ ಮೂಲಕ ಅರ್ಹ ಮಹಿಳೆಯರ ಮನೆಗಳಿಗೆ ತೆರಳಿ ಅರ್ಜಿ ಸಲ್ಲಿಸಲು ನೆರವು ನೀಡಲಾಗುತ್ತದೆ. ಇದರಿಂದ ಹಿಂದೆ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದ ಮಹಿಳೆಯರಿಗೂ ಯೋಜನೆಯ ಲಾಭ ಪಡೆಯುವ ಅವಕಾಶ ಸಿಗಲಿದೆ.

ಇದರ ಜೊತೆಗೆ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳು ಹಾಗೂ ಬ್ರೌಸಿಂಗ್ ಕೇಂದ್ರಗಳಲ್ಲಿಯೂ ಅರ್ಜಿಗಳನ್ನು ಸ್ವೀಕರಿಸುವ ಸಾಧ್ಯತೆ ಇದೆ. ಅರ್ಜಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ನಕಲಿ ಅರ್ಜಿಗಳನ್ನು ತಡೆಯಲು ಬಯೋಮೆಟ್ರಿಕ್ ದೃಢೀಕರಣ ಹಾಗೂ ಫೇಸ್ ರೆಕಗ್ನಿಷನ್ (ಮುಖ ಗುರುತಿಸುವಿಕೆ) ತಂತ್ರಜ್ಞಾನ ಬಳಕೆಯ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಆದರೆ ಅಂತಿಮ ತೀರ್ಮಾನ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅರ್ಜಿಗೆ ಬೇಕಾಗುವ ದಾಖಲೆಗಳು;

ಹೊಸ ಅರ್ಜಿ ಸಲ್ಲಿಸುವ ಮಹಿಳೆಯರು ಈ ಮಾಹಿತಿಗಳನ್ನು ನೀಡಬೇಕಾಗಬಹುದು:

* ಹೆಸರು ಮತ್ತು ವಿಳಾಸ

* ಆಧಾರ್ ಕಾರ್ಡ್ ವಿವರ

* ಕರ್ನಾಟಕದಲ್ಲಿರುವ ಬ್ಯಾಂಕ್ ಖಾತೆ ಮಾಹಿತಿ

* ಜಾತಿ ಪ್ರಮಾಣ ಪತ್ರ ಇಲ್ಲದಿದ್ದರೆ ಸ್ವಯಂ ಘೋಷಿತ ಜಾತಿ ಮಾಹಿತಿ

ಯಾರು ಅರ್ಜಿ ಸಲ್ಲಿಸಬಹುದು?

* ಕರ್ನಾಟಕದ ಮತದಾರರ ಪಟ್ಟಿಯಲ್ಲಿರುವ ಪ್ರತಿ ಕುಟುಂಬದ ಒಬ್ಬ ಅರ್ಹ ಮಹಿಳೆ

* ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು

ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರು

* ಈಗಾಗಲೇ ಯೋಜನೆಯ ಫಲಾನುಭವಿಗಳಾಗಿರುವವರು

ಕೆಲವು ವರ್ಗದವರು ಯೋಜನೆಗೆ ಅರ್ಹರಾಗಿರುವುದಿಲ್ಲ:

* ಮೃತಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರಿನಲ್ಲಿ ಸಲ್ಲಿಸುವ ಅರ್ಜಿಗಳು

* ಆದಾಯ ತೆರಿಗೆ ಪಾವತಿಸುವವರು

* ಜಿಎಸ್‌ಟಿ ರಿಟರ್ನ್ ಸಲ್ಲಿಸುವವರು

ಸರ್ಕಾರದ ಈ ಹೊಸ ಕ್ರಮದಿಂದ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾವಿರಾರು ಮಹಿಳೆಯರಿಗೆ ಮತ್ತೊಮ್ಮೆ ಅವಕಾಶ ದೊರೆಯುವ ನಿರೀಕ್ಷೆ ಮೂಡಿದೆ. ಯೋಜನೆಯvಮರುನೋಂದಣಿ ಕುರಿತು ಸರ್ಕಾರ ಶೀಘ್ರದಲ್ಲೇ ಅಧಿಕೃತ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

New application process for Grihalakshmi Yojana; Who is eligible, who is ineligible? – ತುಳುಟೈಮ್ಸ್

ಇದನ್ನೂ ಓದಿ :ಅಡುಗೆ ಪ್ರಿಯರ ಗಮನ ಸೆಳೆದ ರೆಸಿಪಿಗಳು; ಆಸ್ಟ್ರೇಲಿಯಾದಲ್ಲಿ ಭಾರೀ ಜನಪ್ರಿಯತೆ

=====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtube.com/shorts/WyOvqk86hNs?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page