ಬ್ರೇಕಿಂಗ್ ನ್ಯೂಸ್
ಕರ್ನಾಟಕ

ದೊಡ್ಡ ವಿಧ್ವಂಸಕ ಕೃತ್ಯದ ಸಂಚು : ಹರಿಹರ ಬಂಧನ ಪ್ರಕರಣಕ್ಕೆ ಹೊಸ ತಿರುವು

ದಾವಣಗೆರೆ: Tulu Times l ಹರಿಹರದಲ್ಲಿ ಬಂಧಿತನಾಗಿರುವ 20 ವರ್ಷದ ಶಂಕಿತ ಉಗ್ರನೊಬ್ಬನ ವಿಚಾರಣೆ ವೇಳೆ ಅಚ್ಚರಿಯ ಮಾಹಿತಿಗಳು ಬೆಳಕಿಗೆ ಬಂದಿವೆ. ಉತ್ತರ ಪ್ರದೇಶ ಮೂಲದ ಸುಹೈಲ್ ಎಂಬಾತ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟ ನಡೆಸುವ ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳವಾರ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆತ, ಅಯೋಧ್ಯೆಯ ರಾಮಮಂದಿರದಲ್ಲಿ ಬಾಂಬ್ ಇಟ್ಟು ಸ್ಫೋಟ ನಡೆಸುವ ಉದ್ದೇಶ ಹೊಂದಿದ್ದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ವೇಳೆ ಹಲವು ಮಹತ್ವದ ಸುಳಿವುಗಳು ಪತ್ತೆಯಾಗಿವೆ. ‘ರಾಣಾ ಭಾಯ್’ ಎಂಬ ಹೆಸರಿನಲ್ಲಿ ಪಾಕಿಸ್ತಾನದ ದೇಶ ಕೋಡ್ ಹೊಂದಿರುವ ಸಂಪರ್ಕ ಸಂಖ್ಯೆ ಪತ್ತೆಯಾಗಿದ್ದು, ಅಂತರಾಷ್ಟ್ರೀಯ ಉಗ್ರ ಜಾಲದ ಸಂಪರ್ಕದ ಶಂಕೆ ವ್ಯಕ್ತವಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯ ಮೊಬೈಲ್ ಗ್ಯಾಲರಿಯಲ್ಲಿ ಮಾರಕಾಸ್ತ್ರಗಳೊಂದಿಗೆ ಪೋಸ್ ನೀಡಿರುವ ಹಲವು ಚಿತ್ರಗಳು ಪತ್ತೆಯಾಗಿವೆ. ಕೆಲವು ಚಿತ್ರಗಳಲ್ಲಿ ಪಾಕಿಸ್ತಾನಿ ಸಂಪರ್ಕಗಳ ಸುಳಿವುಗಳೂ ಕಂಡುಬಂದಿವೆ ಎಂದು ಹೇಳಲಾಗಿದೆ.

ಶಂಕೆ ಬರದಂತೆ ಸುಹೈಲ್ ಹರಿಹರದ ಕೈಗಾರಿಕಾ ಪ್ರದೇಶದ ಸಮೀಪದ ಕಾರ್ಖಾನೆಯೊಂದರಲ್ಲಿ ಸಾಮಾನ್ಯ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಆತನ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಸುಹೈಲ್ ಮತ್ತು ಆತನ ಸಹಚರರು ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿ ಹೆಚ್ಚಿನ ಪ್ರಾಣಹಾನಿ ಉಂಟುಮಾಡುವ ಸಂಚು ರೂಪಿಸಿದ್ದರು ಎಂಬ ಮಾಹಿತಿ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಯ ವಿರುದ್ಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಮಂಗಳವಾರ ಸಂಜೆ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

A new twist in the Harihar arrest case: A conspiracy to commit a major act of sabotage – ತುಳುಟೈಮ್ಸ್

ಇದನ್ನೂ ಓದಿ :ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಪ್ರಕ್ರಿಯೆ; ಯಾರು ಅರ್ಹರು, ಯಾರು ಅನರ್ಹರು?

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtube.com/shorts/SxBA8UI-1fI?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page