ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮತದಾರರ ಮನೆಗಳಿಗೆ ತೆರಳಿ ನಮೂನೆ ವಿತರಿಸಿ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ

ಬೆಂಗಳೂರು : Tulu Times l ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಡಿ ಎಣಿಕೆ ನಮೂನೆಗಳನ್ನು ಮನೆ-ಮನೆಗೆ ತೆರಳಿ ವಿತರಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು, ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕೆಲವು ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಮನೆಗಳಿಗೆ ತೆರಳದೆ ಕಚೇರಿಗಳು ಅಥವಾ ಇತರ ಸ್ಥಳಗಳಿಂದಲೇ ಅರ್ಜಿಗಳನ್ನು ವಿತರಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ, ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ವೇಳಾಪಟ್ಟಿಯಂತೆ ಜೂನ್ 30ರಿಂದ ರಾಜ್ಯದಲ್ಲಿ ಎಣಿಕೆ ನಮೂನೆಗಳ ವಿತರಣೆ ಆರಂಭವಾಗಿದೆ. ಆದರೆ ಕೆಲ ಬಿಎಲ್‌ಒಗಳು ಮನೆ-ಮನೆಗೆ ತೆರಳದೆ ಕಚೇರಿಗಳಲ್ಲಿಯೇ ಅರ್ಜಿಗಳನ್ನು ನೀಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಎಲ್ಲಾ ಬಿಎಲ್‌ಒಗಳು ಮತದಾರರ ಮನೆಗಳಿಗೆ ತೆರಳಿ ನಮೂನೆಗಳನ್ನು ವಿತರಿಸುವಂತೆ ಸೂಚಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೆ, ನಮೂನೆಗಳನ್ನು ಭರ್ತಿ ಮಾಡಲು ತೊಂದರೆ ಅನುಭವಿಸುವ ಮತದಾರರು ಮತದಾರರ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ನೆರವು ಪಡೆಯಬಹುದು. ಈ ಸೌಲಭ್ಯದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ.

 

ರಾಜ್ಯದಲ್ಲಿ ಜೂನ್ 30ರಂದು ಆರಂಭವಾದ ಎಸ್‌ಐಆರ್‌ನ ಮನೆ-ಮನೆ ಎಣಿಕೆ ಕಾರ್ಯ ಜುಲೈ 29ರವರೆಗೆ ನಡೆಯಲಿದೆ. ಇದೇ ವೇಳೆ, ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದಾರೆ. ರಾಮನಗರ ಮತ್ತು ಕುಣಿಗಲ್‌ನಲ್ಲಿ ನಡೆದಿರುವ ಪ್ರಕ್ರಿಯೆಯ ವೀಡಿಯೋಗಳನ್ನು ಬಿಡುಗಡೆ ಮಾಡಿದ ಅವರು, ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿ ಆಡಳಿತಾರೂಢ ಕಾಂಗ್ರೆಸ್ ಪ್ರಭಾವ ಬೀರುತ್ತಿದೆ ಎಂದು ದೂರಿದ್ದಾರೆ. ಇನ್ನೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರ ಮತ್ತು ಆಡಳಿತ ಪಕ್ಷದ ಶಾಸಕರು ಬಿಎಲ್‌ಒಗಳ ಮೇಲೆ ಒತ್ತಡ ಹೇರಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Visit voters’ homes and distribute forms: Strict orders to officials. – ತುಳು ಟೈಮ್ಸ್

ಇದನ್ನೂ ಓದಿ :ಸ್ಪೀಡ್‌ ಪೋಸ್ಟ್‌ನಲ್ಲಿ ಗಾಂಜಾ ಪಾರ್ಸೆಲ್‌; ದೇಶವ್ಯಾಪಿ ಡ್ರಗ್ಸ್ ಜಾಲ ಬಯಲು

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/PvZf7aycLaE?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page