ಬ್ರೇಕಿಂಗ್ ನ್ಯೂಸ್
ಸುಳ್ಯ

Sullia : ಸುಳ್ಯದಲ್ಲಿ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ – 2025 ಉದ್ಘಾಟನೆಗೊಂಡಿತು

Sullia : ದಿ.ಯು. ಸು. ಗೌರವ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಉದ್ಘಾಟನೆಗೊಂಡಿತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಪಿ. ಬಿ. ಸುಧಾಕರ ರೈ ನೆರವೇರಿಸಿದರು. ಕನ್ನಡ ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಲಿಂಗಪ್ಪ ಗೌಡ ಕೇರ್ಪಳ ನೆರವೇರಿಸಿದರು. ಸಮ್ಮೇಳನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳು, ವಿಶ್ರಾಂತ ಪ್ರಾಂಶುಪಾಲರಾದ ಡಾ. ಪ್ರಭಾಕರ್ ಶಿಶಿಲರವರು ನೆರವೇರಿಸಿದರು. ಸಮ್ಮೇಳನಾಧ್ಯಕ್ಷತೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪೌರ್ಣಮಿ ಕೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆಯ ವಿದ್ಯಾರ್ಥಿ ಆತ್ಮೀಯ ಭಾಗವಹಿಸಿದರು. ವೇದಿಕೆಯಲ್ಲಿ ನಗರ ಪಂಚಾಯತ್ ಸುಳ್ಯ ಇದರ ಅಧ್ಯಕ್ಷರಾದ ಶಶಿಕಲ ನೀರಬಿದಿರೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಸವಣೂರು ಇದರ ಪ್ರಾಂಶುಪಾಲರಾದ ಪದ್ಮಾವತಿ ಯನ್. ಪಿ., ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಚಂದ್ರಾವತಿ ಬಡ್ಡಡ್ಕ, ಕಾರ್ಯದರ್ಶಿ ಅಬ್ದುಲ್ಲ ಅರಂತೋಡು, ಸುಳ್ಯ ಕ.ಸಾ.ಪದ ಗೌರವ ಕಾರ್ಯದರ್ಶಿ ಗಳಾದ . ತೇಜಸ್ವಿ ಕಡಪಳ, ಚಂದ್ರಾಮತಿ ಕೆ, ಕೋಶಾಧಿಕಾರಿಗಳಾದ ದಯಾನಂದ ಆಳ್ವ ವೇಧಿಕೆಯಲ್ಲಿ ಉಪಸ್ಥಿತರಿದ್ದರು. ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿ, ಸುಳ್ಯ ರೋಟರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಕು. ಗ್ರೀಷ್ಮಾ ಎಂ. ಬಿ. ವಂದಿಸಿದರು.
ರೋಟರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕು. ವೈಷ್ಣವಿ ಕೆ ಹಾಗೂ ಕು. ಹಂಸಿಕಾ ಕೆ. ಆರ್. ವಂದಿಸಿದರು.

ಇದನ್ನೂ ಓದಿ : Alike: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶ;ವ್ಯಕ್ತಿ ಮೃತ್ಯು

……
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/SDL5CAMpIQ0?si=WPztUDdm0DT7ADa0

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 6

You cannot copy content of this page