ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ: ಜುಲೈ 7ಕ್ಕೆ ರೆಡ್ ಅಲರ್ಟ್‌

ಬೆಂಗಳೂರು: Tulu Times l ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಅಬ್ಬರಿಸುತ್ತಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಜುಲೈ 7ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಇದರ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನದಿಗಳು, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.

ಜುಲೈ 11ರವರೆಗೆ ಭೂಕುಸಿತದ ಎಚ್ಚರಿಕೆ ;

ನಿರಂತರ ಮಳೆಯ ಹಿನ್ನೆಲೆ ಪಶ್ಚಿಮ ಘಟ್ಟ ಪ್ರದೇಶಗಳಿಗೆ ಜುಲೈ 7ರಿಂದ 11ರವರೆಗೆ ಭೂಕುಸಿತದ ಎಚ್ಚರಿಕೆ ನೀಡಲಾಗಿದೆ. ಗುಡ್ಡಗಾಡು ಹಾಗೂ ಭೂಕುಸಿತ ಸಂಭವಿಸುವ ಪ್ರದೇಶಗಳಲ್ಲಿ ವಾಸಿಸುವವರು ಅನಗತ್ಯ ಸಂಚಾರವನ್ನು ತಪ್ಪಿಸಿ, ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಜುಲೈ 8ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮುನ್ನೆಚ್ಚರಿಕೆ ;

* ಅಗತ್ಯವಿಲ್ಲದಿದ್ದರೆ ಪ್ರವಾಹ ಮತ್ತು ಗುಡ್ಡಗಾಡು ಪ್ರದೇಶಗಳಿಗೆ ತೆರಳಬೇಡಿ.

* ಭೂಕುಸಿತ ಸಂಭವಿಸುವ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿ.

* ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕೃತ ಸೂಚನೆಗಳನ್ನು ನಿರಂತರವಾಗಿ ಗಮನಿಸಿ.

* ತುರ್ತು ಪರಿಸ್ಥಿತಿಯಲ್ಲಿ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ.

Heavy rains lash coastal Karnataka: Red alert for July 7 – ತುಳುಟೈಮ್ಸ್

ಇದನ್ನೂ ಓದಿ :ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ: ಚಾಲಕ ಸೇರಿ ಮೂವರು ಅಮಾನತು

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/zL6G6JE_ZwA

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page