ಮಂಗಳೂರು: Tulu Times l ಕೇಂದ್ರ ಸರ್ಕಾರದ ‘ಪ್ರಧಾನ ಮಂತ್ರಿ ಇ-ಬಸ್ ಸೇವಾ’ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿರುವ 100 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಸಿದ್ಧತೆಗಳು ವೇಗವಾಗಿ ನಡೆಯುತ್ತಿವೆ. ಈ ಬಸ್‌ಗಳಿಗಾಗಿ ಚಾರ್ಜಿಂಗ್ ಮೂಲಸೌಕರ್ಯವನ್ನು ಒದಗಿಸಲು ಮೆಸ್ಕಾಂ ಈಗಾಗಲೇ ಬಿಡ್‌ಗಳನ್ನು ಆಹ್ವಾನಿಸಿದ್ದು, ಜುಲೈ 8 ಕ್ಕೆ ಬಿಡ್ ಸಲ್ಲಿಕೆಯ ಅವಧಿ ಮುಕ್ತಾಯಗೊಂಡಿದೆ. ಗುತ್ತಿಗೆ ನೀಡಿದ ಮೂರು ತಿಂಗಳೊಳಗೆ ಚಾರ್ಜಿಂಗ್ ಕೇಂದ್ರಗಳ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಗರದ ಕುಂಟಿಕಾನ ಮತ್ತು ಮುಡಿಪು-ಬಾಲೆಪುನಿ ಡಿಪೋಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ನಿರ್ಮಿಸಲು ಕೆಪಿಟಿಸಿಎಲ್ ಈಗಾಗಲೇ ಅನುಮೋದನೆ ನೀಡಿದೆ. ಇನ್ನು ಡಿಪೋಗಳಲ್ಲಿನ ಸಿವಿಲ್ ಕಾಮಗಾರಿಗಳಿಗಾಗಿ ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಟೆಂಡರ್ ಕರೆಯಲಿದ್ದು, ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಡಿಪೋಗಳ ಕೆಲಸ ಮುಗಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ರಾಷ್ಟ್ರ ಮಟ್ಟದಲ್ಲಿ ಬಸ್‌ಗಳ ಖರೀದಿಗೆ ಟೆಂಡರ್ ಕರೆಯಲಿದೆ. ದೇಶದ ಹಲವು ಪ್ರಮುಖ ಕಂಪನಿಗಳು ಈಗಾಗಲೇ ಮಂಗಳೂರಿನ ಡಿಪೋಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಎಲ್ಲವೂ ಯೋಜನೆಯಂತೆ ನಡೆದರೆ ಮುಂದಿನ ಆರು ತಿಂಗಳೊಳಗೆ ಮಂಗಳೂರಿನಲ್ಲಿ ಇ-ಬಸ್ ಸೇವೆ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಭಾರಿ ಬೇಡಿಕೆಯಿದ್ದು, ಆದ್ಯತೆಯ ಮೇರೆಗೆ ಈ ಇ-ಬಸ್‌ಗಳನ್ನು ವಿವಿಧ ಮಾರ್ಗಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹೇಳಿದ್ದಾರೆ.
E-bus era begins in Kudla: MESCOM and KSRTC in full swing with preparations. – ತುಳು ಟೈಮ್ಸ್
ಇದನ್ನೂ ಓದಿ : ಶಾರುಖ್ ಖಾನ್ ‘ಕಿಂಗ್’ ಚಿತ್ರದ 450 ಕೋಟಿ ರೂ. ಬಜೆಟ್ ಸುದ್ದಿ ನಿಜವೇ?
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/TP-rtIPAbk0?feature=share











