ಬ್ರೇಕಿಂಗ್ ನ್ಯೂಸ್
ಕರ್ನಾಟಕ

‘ಗಾಳಿಪಟ’ ಬೆಡಗಿ ಶರ್ಮಿಳಾ ಮಾಂಡ್ರೆ ಮದುವೆ; ಜೈಪುರದಲ್ಲಿ ಅದ್ದೂರಿ ವಿವಾಹ

ಬೆಂಗಳೂರು : Tulu Times l ಕನ್ನಡದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ಗಾಳಿಪಟ’ ಹಾಗೂ ‘ನವಗ್ರಹ’ ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿರುವ ಅವರು, ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂದರಂ ಅವರನ್ನು ವಿವಾಹವಾಗಿದ್ದಾರೆ. ರಾಜಸ್ಥಾನದ ಐತಿಹಾಸಿಕ ಸಮೋಡ್ ಪ್ಯಾಲೇಸ್‌ನಲ್ಲಿ ಕುಟುಂಬದ ಸದಸ್ಯರು, ಆತ್ಮೀಯರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಮದುವೆಯ ಚಿತ್ರಗಳನ್ನು ನಟಿ ಧನ್ಯಾ ರಾಮ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಈ ಶುಭ ಸಮಾರಂಭದ ಫೋಟೋಗಳು ವೈರಲ್ ಆಗಿವೆ.

ಶರ್ಮಿಳಾ ಮತ್ತು ಸುಧನ್ ಸುಂದರಂ ಅವರು ಕಳೆದ ಜೂನ್ 25ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಮದುವೆ ಪೂರ್ವ ಕಾರ್ಯಕ್ರಮಗಳು ನಡೆದಿದ್ದು, ಇದೀಗ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. 2007ರಲ್ಲಿ ಬಿಡುಗಡೆಯಾದ ‘ಸಜನಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶರ್ಮಿಳಾ, ಬಳಿಕ ‘ನವಗ್ರಹ’, ‘ಗಾಳಿಪಟ’, ‘ಮಿರ್ಚಿ’, ‘ಗಾಳಿಪಟ 2’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ನಟನೆಯ ಜೊತೆಗೆ ನಿರ್ಮಾಪಕಿಯಾಗಿಯೂ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ.

ಇನ್ನೊಂದೆಡೆ, ಸುಧನ್ ಸುಂದರಂ ತಮಿಳಿನ ‘ಮಹಾರಾಜ’ ಹಾಗೂ ‘ತಾಕ್ ಕಿಳವಿ’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ನಿರ್ಮಾಪಕರಾಗಿದ್ದು, ಪ್ಯಾಷನ್ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆಯ ಮಾಲೀಕರಾಗಿದ್ದಾರೆ. ಪ್ರಸ್ತುತ ಶರ್ಮಿಳಾ ಮಾಂಡ್ರೆ ಕನ್ನಡದ ‘ಅದೃಷ್ಟಶಾಲಿ’ ಹಾಗೂ ‘ದಸರ’ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದು, ಅವರ ಹೊಸ ಜೀವನಕ್ಕೆ ಅಭಿಮಾನಿಗಳು ಮತ್ತು ಸಿನಿತಾರೆಯರು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

Kite’ Bedagi Sharmila Mandre Marriage; A lavish wedding in Jaipur – ತುಳು ಟೈಮ್ಸ್

ಇದನ್ನೂ ಓದಿ : ಆಹಾರ ವಸ್ತುಗಳ ಬೆಲೆ ಏರಿಕೆ: ಜೂನ್‌ನಲ್ಲಿ ಚಿಲ್ಲರೆ ಹಣದುಬ್ಬರ ಹೆಚ್ಚಳ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtube.com/shorts/TP-rtIPAbk0?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 208

You cannot copy content of this page