ಬಂಟ್ವಾಳ: Tulu Times l ಬಿಸಿ ರೋಡ್‌ನಲ್ಲಿ ದುಷ್ಕರ್ಮಿಯಿಂದ ಹತ್ಯೆಗೀಡಾದ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ್, ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹತ್ಯೆ ಪ್ರಕರಣದ ಆರೋಪಿಯನ್ನು ಕೂಡಲೇ ಬಂಧಿಸಿ, ಸಾರ್ವಜನಿಕರಲ್ಲಿ ಮೂಡಿರುವ ಆಕ್ರೋಶವನ್ನು ಗಮನದಲ್ಲಿಟ್ಟುಕೊಂಡು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಆರೋಪಿಯನ್ನು ಎನ್‌ಕೌಂಟರ್‌ಗೆ ಒಳಪಡಿಸಬೇಕು ಎಂಬ ಬೇಡಿಕೆಯನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಜಾರಿಗೆ ತರಬೇಕೆಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು. ಮೃತ ಲಾವಣ್ಯ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಬೇಕೆಂದು ಸರ್ಕಾರಕ್ಕೆ ಅರುಣ್ ಕುಮಾರ್ ಪುತ್ತಿಲ್ ಆಗ್ರಹಿಸಿರುತ್ತಾರೆ.
BC Road murder case: Arun Kumar Puttil condoles the deceased Lavanya’s family – ತುಳುಟೈಮ್ಸ್
ಇದನ್ನೂ ಓದಿ :ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ; ಆರೋಪಿ ಬಂಧನ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/Z_wNvbFA0Kw?si=1sUkzD6ywT_NAu0q











