ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ: ಗಾಂಧಿನಗರದಲ್ಲಿ ಸಂಚಾರಕ್ಕೆ ತೀವ್ರ ತೊಂದರೆ, ತಕ್ಷಣ ದುರಸ್ತಿಗೆ ಸಾರ್ವಜನಿಕರ ಒತ್ತಾಯ

ಸುಳ್ಯ: Tulu Times l ನಗರದ ಗಾಂಧಿನಗರ ಮಸೀದಿ ಎದುರು, ನಾವೂರು ಜಂಕ್ಷನ್ ಸಮೀಪದ ಮುಖ್ಯರಸ್ತೆಯಲ್ಲಿ ದೊಡ್ಡ ಗುಂಡಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ರಸ್ತೆಯ ಮಧ್ಯಭಾಗದಲ್ಲೇ ಅಪಾಯಕಾರಿ ಗುಂಡಿ ನಿರ್ಮಾಣವಾಗಿರುವ ಕಾರಣ, ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಗುಂಡಿಯನ್ನು ತಪ್ಪಿಸಲು ವಾಹನಗಳು ದಿಕ್ಕು ಬದಲಾಯಿಸುವ ಸಂದರ್ಭಗಳು ಹೆಚ್ಚಾಗಿವೆ. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಇಂದು ಬೆಳಗ್ಗೆ ಸಮಾಜ ಸೇವಕರಾದ ಮುಸ್ತಾಫ ಅಂಜಿಕ್ಕಾರ್ ಸ್ಥಳದಲ್ಲೇ ನಿಂತು ವಾಹನಗಳ ಸುಗಮ ಸಂಚಾರಕ್ಕೆ ಸಹಕರಿಸಿದರು.

ವಾಹನ ಸವಾರರಿಗೆ ಎಚ್ಚರಿಕೆ ನೀಡುವ ಮೂಲಕ ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದರು. ಅವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ರಸ್ತೆಯ ಮೇಲಿನ ನೀರಿನಿಂದ ಗುಂಡಿಯ ಆಳ ಸ್ಪಷ್ಟವಾಗಿ ಕಾಣಿಸದ ಕಾರಣ ಅಪಾಯ ಮತ್ತಷ್ಟು ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದ್ದರಿಂದ ಈ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸುಳ್ಯ ನಗರ ಪಂಚಾಯತ್‌ಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Sullia: Severe traffic disruption in Gandhinagar; public demands immediate repairs – ತುಳುಟೈಮ್ಸ್

ಇದನ್ನೂ ಓದಿ :ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್: ಜು.18ರಂದು ಶಾಲಾ-ಕಾಲೇಜುಗಳಿಗೆ ರಜೆ

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/epU3Pcjby3U

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 8

You cannot copy content of this page